Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾದರೆ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ : ಚಿತ್ರದುರ್ಗದಲ್ಲಿ ಮಂದಕೃಷ್ಣ ಮಾದಿಗ ಹೇಳಿಕೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.18  : ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾದಾಗ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ. ಸರ್ಕಾರ ಪರಿಶಿಷ್ಠ ಜಾತಿ ಪರಿಶಿಷ್ಟ ವರ್ಗದವರ ಪರವಾಗಿದೆ. ಕೇಂದ್ರದಲ್ಲಿ ಬಿಜೆಪಿ. ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆಂದು ಕಾಂಗ್ರೆಸ್‍ನವರು ದಲಿತರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ನಲವತ್ತು ಪರ್ಸೆಂಟ್ ಎಸ್ಸಿ.ಎಸ್ಟಿ.ಗಳಿಗೆ ಸಚಿವ ಸ್ಥಾನ ಕೊಡಲಾಗಿತ್ತು. ಅದೇ ಬಿಜೆಪಿ. ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಶೇ. 60 ಪರ್ಸೆಂಟ್ ಸಚಿವ ಸ್ಥಾನ ನೀಡಲಾಗಿತ್ತು ಎಂದು ತಿಳಿಸಿದರು.

ಮನಮೋಹನ್‍ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಪ್ರಣಬ್‍ಮುಖರ್ಜಿ ಹಾಗೂ ಪ್ರತಿಭಾ ಪಾಟೀಲ್ ಇವರುಗಳನ್ನು ರಾಷ್ಟ್ರಪತಿಯನ್ನಾಗಿ ಮಾಡಿ ಬ್ರಾಹ್ಮಣರನ್ನು ಓಲೈಸುವ ಕೆಲಸ ಮಾಡಿತು. ಅದೇ ಈಗಿನ ನಮ್ಮ ಪ್ರಧಾನಿ ನರೇಂದ್ರಮೋದಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿಯನ್ನಾಗಿ ಮಾಡಿ ಶೋಷಿತರ ಪರವಾಗಿದ್ದೇವೆನ್ನುವುದನ್ನು ತೋರಿಸಿದರು.

ಕೇಂದ್ರದಲ್ಲಿ ಯು.ಪಿ.ಎ.ಸರ್ಕಾರ ಅಧಿಕಾರದಲ್ಲಿದ್ದಾಗ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇವರುಗಳನ್ನು ಸಾಕಷ್ಟು ಬಾರಿ ಭೇಟಿಯಾಗಿ ಮಾದಿಗರ ಮೀಸಲಾತಿ ವರ್ಗೀಕರಣಗೊಳಿಸುವಂತೆ ಮನವಿ ಮಾಡಿದ್ದೆ. ಯಾರು ಕಿವಿಗೆ ಹಾಕಿಕೊಳ್ಳಲಿಲ್ಲ. ನಮ್ಮ ಹೋರಾಟಕ್ಕೆ ಕಾಂಗ್ರೆಸ್ ವಿರುದ್ದವಿದೆ. ಹೈದರಾಬಾದ್‍ನಲ್ಲಿ ನಡೆದ ಮಾದಿಗರ ಮೀಸಲಾತಿ ವರ್ಗಿಕರಣ ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಮೀಸಲಾತಿ ವರ್ಗಿಕರಣಗೊಳಿಸುವುದಾಗಿ ಭರವಸೆ ಕೊಟ್ಟಿದ್ದರು. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ. ಅಭ್ಯರ್ಥಿಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕೇವಲ ಕರ್ನಾಟಕವಷ್ಟೆ ಅಲ್ಲ. ತೆಲಂಗಾಣ, ಆಂಧ್ರ, ತಮಿಳುನಾಡು, ಮಹಾರಾಷ್ಟ್ರ, ಛತ್ತಿಸ್‍ಗಡದಲ್ಲಿಯೂ ಬಿಜೆಪಿ ಗೆಲುವಿಗೆ ಶ್ರಮಿಸುತ್ತೇವೆಂದರು.

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಮಾದಿಗರ ಮೀಸಲಾತಿ ವರ್ಗಿಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸದಾಶಿವ ಆಯೋಗ ನೇಮಿಸಿದ್ದರು ಕೂಡ ಕಾಂಗ್ರೆಸ್ ನಮಗೆ ವ್ಯತಿರಿಕ್ತವಾಗಿದೆ. ಸುಪ್ರಿಂಕೋರ್ಟ್‍ನಲ್ಲಿ ಕೇಸು ಬಾಕಿಯಿದ್ದು, ವಿಚಾರಣೆ ನಡೆಯುತ್ತಿದೆ. ಮಾದಿಗರ ಮೀಸಲಾತಿ ವರ್ಗಿಕರಣಕ್ಕೆ ನ್ಯಾಯ ಕೊಡಿಸುವುದು ನನ್ನ ಹೋರಾಟದ ಉದ್ದೇಶ. ಯು.ಪಿ.ಎ.ಸರ್ಕಾರದಲ್ಲಿ ಮೀಸಲಾತಿ ಎನ್ನುವುದು ಮುಂದೆ ಸಾಗಲಿಲ್ಲ.

ಮೀಸಲಾತಿ ವರ್ಗಿಕರಣಕ್ಕೆ ಅಡ್ಡಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ.ಯನ್ನು ಅಧಿಕಾರಕ್ಕೆ ತರಬೇಕಾಗಿರುವುದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಬಹುಮತಗಳಿಂದ ಗೆಲ್ಲಿಸಿ ಎಂದು ಮಂದಕೃಷ್ಣ ಮಾದಿಗ ಮನವಿ ಮಾಡಿದರು.

ಮಾದಿಗ ಮೀಸಲಾತಿ ವರ್ಗಿಕರಣ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ನರಸಪ್ಪ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ತಿಪ್ಪೇಸ್ವಾಮಿ ಛಲವಾದಿ, ಮಂಜಣ್ಣ ಚಿಕ್ಕಾಲಘಟ್ಟ, ಹನುಮಂತಪ್ಪ ದುರ್ಗ, ದೇವರಾಜ್ ನಗರಂಗೆರೆ, ಮೋಹನ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!