Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಜಾರ ಸಮಾಜವನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿ : ಎಂ.ಸತೀಶ್‍ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552,

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಬಂಜಾರ ಸಮಾಜವನ್ನು ಕಡೆಗಣಿಸಿ ರಾಜಕೀಯವಾಗಿ ಪ್ರಾತಿನಿಧ್ಯ ನೀಡದ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದೆಂದು ಜಿಲ್ಲಾ ಬಂಜಾರ ಲಂಬಾಣಿ ಸಂಘದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಎಚ್ಚರಿಸಿದರು.

ಬಂಜಾರ ಭವನದಲ್ಲಿ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು ನಮ್ಮ ದೊಡ್ಡ ಸಮಾಜಕ್ಕೆ ವಿಧಾನಸಭೆಯಲ್ಲಿ ಸಚಿವ ಸ್ಥಾನ ಕೂಡ ಕೊಟ್ಟಿಲ್ಲ. ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಯೂ ನಮ್ಮ ಜನಾಂಗದವರು ಸ್ಪರ್ಧಿಸಲು ಟಿಕೆಟ್ ಕೊಡದೆ ದ್ರೋಹವೆಸಗಿರುವ ಕಾಂಗ್ರೆಸ್‍ಗೆ ಈ ಸಾರಿ ನಮ್ಮ ಮತವಿಲ್ಲ. ಬದಲಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರನ್ನು ಗೆಲ್ಲಿಸುವುದು ನಮ್ಮ ಗುರಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ತಾಂಡ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಗಿರೀಶ್ ಮಾತನಾಡಿ ಕಾಂಗ್ರೆಸ್ ಹಠಾವೋ ಬಂಜಾರ ಬಚಾವೋ ಎಂಬುದು ನಮ್ಮ ಘೋಷಣೆ. ನಮ್ಮ ಜನಾಂಗದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತಾಂಡ ಅಭಿವೃದ್ದಿ ನಿಗಮಕ್ಕೆ ಅನುದಾನ ನೀಡಿಲ್ಲ. ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ಕಡೆಗಣಿಸುತ್ತಿದೆ.

ನಮ್ಮ ಜನಾಂಗಕ್ಕೆ ಸಚಿವ ಸ್ಥಾನವಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ಸ್ಪರ್ಧಿಸಲು ಅವಕಾಶವಿಲ್ಲ. ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್‍ನ್ನು ಈ ಚುನಾವಣೆಯಲ್ಲಿ ಸೋಲಿಸಿ ಬಿಜೆಪಿ.ಯ ಗೋವಿಂದ ಕಾರಜೋಳರನ್ನು ಗೆಲ್ಲಿಸುತ್ತೇವೆಂದರು.

ಶಂಕರ್‍ನಾಯ್ಕ, ಉಮಾಪತಿ, ತಣಿಗೆಹಳ್ಳಿ ಕುಮಾರ್‍ನಾಯ್ಕ, ಪರಮೇಶ್ವರ್‍ನಾಯ್ಕ, ಮದನ್, ಬೇವಿನಹಳ್ಳಿ ಮಂಜುನಾಥ್, ಓಂಕಾರ್‍ನಾಯ್ಕ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment