ಚಿತ್ರದುರ್ಗ. ಏ.19: ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್ ಪೇ, ಪೇಟಿಎಂ, ಗೂಗಲ್ ಪೇ ಗಳ ಮುಖಾಂತರ ಸಾರ್ವಜನಿಕರು ಕರ ಪಾವತಿಸಬಹದು. ಇಲ್ಲವಾದರೆ ಖಜಾನೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗಳಲ್ಲಿ ಪಾವತಿಸಬಹುದಾಗಿದೆ.ಇದರ ಹೊರತಾಗಿ ನಗರಸಭೆ ಕಚೇರಿಯಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಕೌಂಟರ್‍ನಲ್ಲಿಯು ಸಹ ಕರ ಪಾವತಿಸಬಹುದಾಗಿದೆ.
ಸಾರ್ವಜನಿಕರು ಈ ಅವಕಾಶಗಳನ್ನು ಬಳಸಿ ಸುಗಮವಾಗಿ ನಗರಸಭೆಯ ಕರಗಳನ್ನು ಪಾವತಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.