ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು ವ್ಯಕ್ತವಾಗುತ್ತಿದ್ದು, ಗೆಲುವು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ನಗುತಾ ರಂಗನಾಥ್ ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡಿದ್ದೇನೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಗ್ಯಾರೆಂಟಿಗಳ ಭರವಸೆ ನೀಡಿ ಗೆದ್ದ ನಂತರ ಎಲ್ಲವನ್ನು ಈಡೇರಿಸಿರುವುದರಿಂದ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ. ಈ ನಿಟ್ಟಿನಲ್ಲಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಹಾದಿ ಸುಗಮವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಮಾರುತಿ ನವೀನ್ ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















