Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರಳ ಪದಗಳಲ್ಲಿ ಜೀವನ ಮೌಲ್ಯ ಬೋಧಿಸಿದ ಭಗವಾನ್ ಮಹಾವೀರ : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಮತ

---Advertisement---

ಚಿತ್ರದುರ್ಗ.ಏ.21:    ಸತ್ಯ, ಅಹಿಂಸೆ, ಬ್ರಹ್ಮಚರ್ಯ, ಆಸ್ತೇಯ, ಅಪರಿಗ್ರಹ ಎನ್ನುವ ಐದು ಸರಳ ಪದಗಳಲ್ಲಿ ಜೀವನ ಮೌಲ್ಯಗಳನ್ನು ಭಗವಾನ್ ಮಹಾವೀರ ಬೋಧಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.

 

ನಗರದ ತ.ರಾ.ಸು ರಂಗಮಂದಿರದಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭಗವಾನ್ ಮಹಾವೀರ ಸರಳ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಸತ್ಯ ಹೇಳುವುದು, ಪರರನ್ನು ಹಾಗೂ ಸಕಲ ಜೀವಗಳ ಎಡೆಗೆ ಅಹಿಂಸಾ ಭಾವದಿಂದ ನಡೆದುಕೊಳ್ಳುವುದು. ಶುದ್ಧ ಚಾರಿತ್ರ್ಯ ಕಾಪಾಡಿಕೊಳ್ಳುವುದು. ಪರ ವಸ್ತುಗಳನ್ನು ಕದಿಯದಿರುವುದು. ಎಲ್ಲಾ ಭವ ಬಂಧನಗಳಿಂದ ಮುಕ್ತವಾಗಿರಬೇಕು ಎಂಬುದು ಮಹಾವೀರ ಬೋಧನೆ ತಿರುಳಾಗಿದೆ.

ಮಹಾವೀರರ ಈ ಬೋಧನೆಗಳು ಸರಳ ಪದಗಳಲ್ಲಿ ಇವೆ. ಇವುಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಇದರಿಂದ ಹಿಂಸೆ, ಯುದ್ಧಗಳು ಭೀತಿಯಿಲ್ಲದೆ ಎಲ್ಲರು ಪ್ರಗತಿ ಕಾಣಬಹುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯಪಟ್ಟರು.

ಜೈನ ಸಮಾಜದ ಮುಖಂಡ ವಸ್ತಿಮಲ್ ಮಾತನಾಡಿ, ಮಹಾವೀರ ಸರಳ ಬೋಧನೆ ಎಂದರೆ ‘ಜಿಯೋ ಜೀನೇದೋ’ ಇದರ ಅರ್ಥ ನೀವು ಬದುಕಿ ಇತರರಿಗೆ ಬದುಕಲು ಬಿಡಿ ಎಂಬುದಾಗಿದೆ. ಕಾಮ, ಕ್ರೋಧ, ಮೋಹ, ಮದ, ಮಾತ್ಸರ್ಯಗಳನ್ನು ಜಯಿಸಿದರೆ ಮುಕ್ತಿ ಪಡೆಯಬಹುದಾಗಿದೆ. ರಾಜ ಮನೆತನದಲ್ಲಿ ಹುಟ್ಟಿದರೂ ವೈಭೋಗ ತೊರೆದು ಸನ್ಯಾಸತ್ವನ್ನು ಮಹಾವೀರರು ಪಡೆದುಕೊಂಡರು. ಇದೇ ಹಾದಿಯಲ್ಲಿ ಇಂದಿಗೂ ಹಲವಾರು ಕೋಟ್ಯಾಧಿಪತಿಗಳು ತಮ್ಮ ಎಲ್ಲಾ ಆಸ್ತಿ ಪಾಸ್ತಿಗಳನ್ನ ದಾನ ಮಾಡಿ ಸನ್ಯಾಸ ದೀಕ್ಷೆ ಪಡೆಯುವುದನ್ನು ನೋಡಬಹುದು ಎಂದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ನಾಡಗೀತೆ ಪ್ರಸ್ತುತ ಪಡಿಸುವುದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ತಹಶೀಲ್ದಾರ್ ಡಾ.ನಾಗವೇಣಿ, ಜೈನ ಸಮುದಾಯದ ಮುಖಂಡರಾದ ಪ್ರೇಮ್‍ಚಂದ್,ಮನ್ಸಿರಾಜ್ ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment