ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ.
ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ – 20.51%, ಹೊಸದುರ್ಗ-17.89%, ಮೊಳಕಾಲ್ಮೂರು- 26.77%,ಪಾವಗಡ- 20.51%,ಶಿರಾ-19.90% ಮತದಾನವಾಗಿದ್ದು, ಮತದಾರರಿಂದ ಉತ್ತಮ ಸ್ಪಂದನೆ ದೊರಕಿದೆ. ಬಿರು ಬಿಸಿಲಿನ ನಡುವೆಯೂ ಮತ್ತು ಮತಾದದರು ಮತಗಟ್ಟೆಗಳಿಗೆ ಆಗಮಿಸಿ ಸಂತಸದಿಂದ ಮತಚಲಾಯಿಸುತ್ತಿದ್ದಾರೆ.
ಈ ಬಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು ನೆರಳು, ಕುಡಿಯುವ ನೀರು ಆದ್ಯತೆ ವಹಿಸಿದೆ. ವಿಕಲಚೇತನರು ಹಾಗೂ ಹಿರಿಯರು ನಾಗರಿಕರ ಅನುಕೂಲಕ್ಕಾಗಿ ಗಾಲಿ ಕುರ್ಚಿಗಳು ಹಾಗೂ ರ್ಯಾಂಪ್‌ಗಳ ಮತಗಟ್ಟೆಯಲ್ಲಿ ಸೌಲಭ್ಯ ಕಲ್ಪಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












