Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55) ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹೊಟ್ಲೆಪನಹಳ್ಳಿ  202 ಮತ ಕೇಂದ್ರದಲ್ಲಿ ಕರ್ತವ್ಯ ನಿರತರಾಗಿದ್ದಾಗ ಕುಸಿದು ಬಿದ್ದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ.

ಚಳ್ಳಕೆರೆ ನಗರದ ವಿಠಲನಗರದಲ್ಲಿ ವಾಸಮಾಡುತ್ತಿದ್ದು ಇಂದು ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದರು.

ಆಸ್ಪತ್ರೆಗೆ  ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಾಗೂ ಚುನಾವಣಾಧಿಕಾರಿಗಳು ಭೇಟಿ ನೀಡಿ ಮೃತ ಯಶೋದಮ್ಮ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಾದ ಕುಮಾರಸ್ವಾಮಿ,ಎಎಸ್ಪಿ ಎಸ್ ಜೆ ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿ ಆನಂದ ಡಿವೈಎಸ್ ಪಿ ಟಿ.ಬಿ.ರಾಜಣ್ಣ,ಸೇರಿದಂತೆ ಅಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment