Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

---Advertisement---

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ. ಇದರ‌ನಡುವೆ ಬರೀ ಪ್ರಜ್ವಲ್ ರೇವಣ್ಣ ಮಾತ್ರವಲ್ಲ ರೇವಣ್ಣ ವಿರುದ್ಧವೂ ದೂರು ದಾಖಲಾಗಿದೆ.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆ ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎ1 ಆರೋಪಿ ರೇವಣ್ಣ ಆಗಿದ್ದರೆ, ಎ2 ಆರೋಪಿ ಪ್ರಜ್ವಲ್ ರೇವಣ್ಣ ಆಗಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ) ರಡಿ FIR ದಾಖಲಿಸಲಾಗಿದೆ.

 

ದೂರಿನಲ್ಲಿ ಏನಿದೆ..?:

ನಮ್ಮ ಪತಿಗೆ ಹೆಚ್ ಡಿ ರೇವಣ್ಣ ಡೈರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ನನಗೆ 2015ರಲ್ಲಿ ಹಾಸ್ಟೇಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ನಮ್ಮ ಮನೆಗೆ ಅಡುಗೆ ಕೆಲಸಕ್ಕೆ ಬರುವಂತೆ ಹೇಳಿದ್ದರು. ಅಡುಗೆ ಕೆಲಸಕ್ಕೆ ಹೋದಾಗ ಭವಾನಿ ಅವರು ಮನೆಯಲ್ಲಿ ಇಲ್ಲದೆ ಇದ್ದಾಗ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಕೊಠಡಿಯಲ್ಲಿದ್ದಾಗ ಹಣ್ಣು ನೀಡುವ ನೆಪದಲ್ಲಿ ಸೀರೆ ಹಿಡಿದು ಎಳೆದಾಡಿದ್ದಾರೆ. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬುದನ್ನು ಸೇರಿದಂತೆ ವಿವರವಾಗಿ ಬರೆದು ದೂರು ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment