ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

suddionenews
1 Min Read

ಚಾಮರಾಜನಗರ: ಬಿಜೆಪಿಯ ಹಿರಿಯ ಮುಖಂಡ, ಸಂಸದ ಶ್ರೀನಿವಾಸ್ ಪ್ರಸಾದ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಾರ್ಡಿಯಾಕ್ ಅರೆಸ್ಟ್ ಆಗಿ, ಮಧ್ಯರಾತ್ರಿ 12.30ಕ್ಕೆ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ವೆಂಟಿಲೇಟರ್ ಸಹಾಯದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಕಾರ್ಡಿಯಾಕ್ ಅರೆಸ್ಟ್ ಆಗಿ ನಿಧನರಾಗಿದ್ದಾರೆ.

 

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ. ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ. ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ.

 

ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ. ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *