Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಚಿತ್ರದುರ್ಗ ಶಾಸಕರಾಗಿ ಇದೇ ಪ್ರಥಮ ಬಾರಿಗೆ ಬಿ.ಎಲ್.ವೇಣು ಅವರ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಚಿತ್ರದುರ್ಗ ಕೋಟೆ ಅಭಿವೃದ್ಧಿ, ಕೋಟೆಯಲ್ಲಿ ಪ್ರವಾಸಿಗರಿಗೆ ಅನುಕೂಲಕರವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಬಗ್ಗೆ ಬಿ.ಎಲ್.ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯ ಬಗ್ಗೆ ಕೂಲಂಕುಷವಾಗಿ ಶಾಸಕರೊಂದಿಗೆ ಚರ್ಚಿಸಿದ ವೇಣು ಅವರು, ಜನತೆಗೆ ಅತೀ ಶೀಘ್ರದಲ್ಲೇ ಈ ಯೋಜನೆ ತಲುಪಬೇಕೆಂದು ತಾಕೀತು ಮಾಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯೋಜನೆ ತ್ವರಿತ ಜಾರಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಟ್ಟಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಬಗ್ಗೆಯೂ ಪ್ರಸ್ಥಾಪಿಸಿದ ವೇಣು ಅವರು, ಈ ನಿಟ್ಟಿನಲ್ಲಿ ಕಾರ್ಯ ವಿಳಂಭ ಮಾಡದೇ, ತುರ್ತು ಕೆಲಸಗಳು ಮಾಡುವುದು ಅಗತ್ಯವಿದೆ ಎಂದು ವಿವರಿಸಿದರು.
ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಜನಮನ್ನಣೆ ಗಣಿಸಬೇಕೆಂದು ಬಿ.ಎಲ್.ವೇಣು ಅªರು ಶಾಸಕರಿಗೆ ಸೂಚನೆಗಳನ್ನು ನೀಡಿದರು.

ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ.  ಜನರ ನಿರೀಕ್ಷೆಗಳನ್ನು ಯಶಸ್ಸುಗೊಳಿಸುತ್ತೇನೆಂದು ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...