ಸುದ್ದಿಒನ್, ಚಿತ್ರದುರ್ಗ, ಮೇ. 06 : ಗುತ್ತಿಗೆದಾರನ ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗುತ್ತಿಗೆದಾರ ಸಿದ್ದನಗೌಡ ಅವರಿಂದ ಕಾರ್ಯದರ್ಶಿ ಬಸವರಾಜಪ್ಪ 4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















