Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

---Advertisement---

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್ ಕೂಡ ನೀಡಲಾಗಿದೆ. ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಈಗ ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆಯನ್ನು ನೀಡಿದ್ದು, ಇದಕ್ಕೆಲ್ಲ ರುವಾರಿ ಒನ್ ಅಂಡ್ ಓನ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎಂದಿದ್ದಾರೆ.

ಕಾಂಗ್ರೆಸ್ ಗೆ ಬರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಫರ್ ಕೊಟ್ಟರು ಎನ್ನಲಾದ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಅರ್ಧಂಬರ್ಧ ಆಡಿಯೋ ಮಾತ್ರ ಪ್ಲೇ ಮಾಡಿದ್ದು, ಫುಲ್ ಆಡಿಯೋ ಪ್ಲೇ ಮಾಡುವುದಕ್ಕೆ ಆಗಲ್ಲ ಎಂದಿದ್ದಾರೆ. ಆ ಆಡಿಯೋದಲ್ಲಿ ಹೇಳ್ರೀ ಏನು ವಿಚಾರ ಎಂಬುದಷ್ಟೇ ಕೇಳಿಸಿದೆ. ಎಸ್ಐಟಿ ಅಧಿಕಾರಿಯ ಫೋಟೊ ತೋರಿಸಿ, ಇವರು ನನ್ನ ಹೇಳಿಕೆಯಲ್ಲಿರುವ ಡಿಕೆ ಶಿವಕುಮಾರ್ ಅವರ ಹೆಸರನ್ನು ತೆಗೆಯುವುದಕ್ಕೆ ಹೇಳಿದರು ಎಂದು ಆರೋಪಿಸಿದ್ದಾರೆ.

ಇಡೀ ಪ್ರಕರಣ ಕಾಂಗ್ರೆಸ್ ಕುಮ್ಮಕ್ಕಿನಿಂದ ನಡೆದಿದೆ. ನಿಜವಾದ ಆರೋಪಿಗಳನ್ನು ಕಾಂಗ್ರೆಸ್ ಬಚ್ಚಿಟ್ಟುಕೊಂಡಿದ್ದು, ಸಂತ್ರಸ್ತೆಯರನ್ನು ತಂದು ಫೀಡ್ ಮಾಡುತ್ತಿದೆ. ಸಂತ್ರಸ್ತೆಯರಿಗೆ ಹಣ ಕೊಟ್ಟು ಇವರು ಕರೆದುಕೊಂಡು ಬಂದಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರ ನನ್ನನ್ನು ಸಿಕ್ಕಿಸುವುದಕ್ಕೆ ಹೊರಟಿದೆ. ಎಲ್.ಆರ್. ಶಿವರಾನೇಗೌಡ ಅವರನ್ನು ಮಧ್ಯವರ್ತಿಯಾಗಿ ಕಳುಹಿಸಿದೆ. ಆ ಮಹಾನಾಯಕ ಶಿವರಾಮೇಗೌಡರನ್ನು ಮಧ್ಯವರ್ತಿಯಾಗಿ ನಮ್ಮ ನಡುವೆ ಬಿಟ್ಟಿದ್ದಾರೆ. ನಾನು ಸಿಬಿಐಗೆ ಎಲ್ಲಾ ಮಾಹಿತಿಯನ್ನು ನೀಡುತ್ತೇನೆ. ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನ್ ಕಾಂಗ್ರೆಸ್ ಸರ್ಕಾರದ್ದು. ವೈರಲ್ ಆಗಿರುವ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment