Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್ ಕಪ್‍ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.

ಐಸಿರಿ, ಸಮೃದ್ದಿ, ಚಳ್ಳಕೆರೆ ಟೋಲ್‍ಗೇಟ್‍ನಲ್ಲಿ ರವಿ ಬಾರ್ ಅಂಡ್ ರೆಸ್ಟೊರೆಂಟ್ ಹಾಗೂ ಮಧುಲೋಕ ಬಾರ್‍ಗಳ ಮೇಲೆ ದಾಳಿ ನಡೆಸಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಲೋಟಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಇನ್ನು ಮುಂದೆ ಬಳಸಿದರೆ ಪರವಾನಗಿ ರದ್ದುಗೊಳಿಸುವುದಾಗಿ ಬಾರ್ ಮಾಲೀಕರುಗಳಿಗೆ ಎಚ್ಚರಿಕೆ ನೀಡಿದರು.

ನಗರಸಭೆ ಪರಿಸರ ಇಂಜಿನಿಯರ್ ಜಾಫರ್, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಸರಳ, ಭಾರತಿ, ನಾಗರಾಜ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment