Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

---Advertisement---

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ ಹೋದ ಜನ ಪರದಾಡುವಂತೆ ಆಗಿದೆ. ನಾಳೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ದಕ್ಷಿಣ ಒಳನಾಡಿನಲ್ಲಿ ವಾಡಿಕೆಯಂತೆ ಮಳೆ ಶುರುವಾಗಿದೆ. ಮೇ 11 ರಿಂದ 17ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಸಹ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಎಚ್ಚರಿಕೆ ಹವಾಮಾನ ‌ಇಲಾಖೆ ಎಚ್ಚರಿಕೆ ನೀಡಿದೆ.

 

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈಗಾಗಲೇ ತುಮಕೂರು, ಶಿವಮೊಗ್ಗ, ಯಾದಗಿರಿ, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಘಾಟ್​​ಗಳಲ್ಲಿ ಹಾಗೂ ಚಿಕ್ಕಮಗಳೂರಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...