ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪ್ರತಿವರ್ಷದಂತೆ ಈ ಬಾರಿಯೂ ಕೂಡ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ. 60 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
1) ಸ್ಪೂರ್ತಿ PR -582/625 (93.12)
2) ಕೃಪಾ ಧನುಷ್ SD-568/625-(90.88)
3) ಮಾನ್ಯಾ J -567/625-(90.72)
4) ಪ್ರೀತಿಕಾ k R -566/625-(90.56)
5) ಆಪೇಕ್ಷಾ k T -560/625-(89.60)
6) ವಾಣಿಶಾ KV-546/625-(87.36)
7) ಸುಚಿತ್ರಾ KN -545/625-(87.20)
8) ಲಕ್ಷ್ಮೀ GR -540/625-(86.40)
9) ರೋಹಿಣಿ Y-539/625-(86.24)
10) ಪಲ್ಲವಿ S p -538/625-(86.08)
11) ನಯನಾ GU -534/625-(85.44)
12) ಬಸವ ಕಿರಣ K-532/625-(85.12)
ನಮ್ಮ ವಿದ್ಯಾ ಸಂಸ್ಥೆಯಲ್ಲಿನ ಎಸ್.ಎಸ್.ಎಲ್.ಸಿ ಮಕ್ಕಳ ಸಾಧನೆ, ಶಿಕ್ಷಕರ ನಿರಂತರ ಪರಿಶ್ರಮದ ಪ್ರತಿಪಲವಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ. ಎಲ್ಲಾ ಮಕ್ಕಳಿಗೆ, ಪೋಷಕರಿಗೆ, ಶಿಕ್ಷಣ ಸಂಸ್ಥೆಯ ಪರವಾಗಿ ಹೃದಯಪೂರ್ವಕ ಧನ್ಯವಾದಗಳು. ಹಾಗೆಯೇ ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕಾರ್ಯದರ್ಶಿ ಎನ್. ಎಲ್. ವೆಂಕಟೇಶ್ ರೆಡ್ಡಿ ಶುಭ ಕೋರಿದರು.
ಸಹ ಕಾರ್ಯದರ್ಶಿ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿ, ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾರ್ಥಿ ಜೀವನಕ್ಕೆ ಶುಭ ಕೋರಿದ್ದಾರೆ.