ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 90,000 ಸಾಲ ಪಡೆದಿದ್ದು ಜಮೀನಿನಲ್ಲಿ ತೊಗರಿ ಮತ್ತು ಕಡಲೆ ಬೆಳೆ ಹಾಕಿದ್ದರು ಆದರೆ ಮಳೆ ಬಾರದ ಹಿನ್ನೆಲೆಯಲ್ಲಿ ಬೆಳೆ ಕೈಕೊಟ್ಟಿತ್ತು ಕೈ ಸಾಲವನ್ನು ಸಹ ಮಾಡಿದ್ದರಿಂದ ಗ್ರಾಮದಲ್ಲಿ ಹೋಟೆಲ್ ನಡೆಸಿದರೂ ಸಹ ಲಾಭದಾಯಕವಾಗಿರಲಿಲ್ಲ. ಸಾಲ ತೀರಿಸಲಾಗದೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.