Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣೇಶ್‍ನಾಯ್ಕ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ಆರ್.ನುಲೇನೂರಿನಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

ಸಂತಾಪ : ಕಳೆದ ಕೆಲವು ದಿನಗಳಿಂದ ಪತ್ರಿಕೆ ವಿತರಿಸುತ್ತಿದ್ದ ಗಣೇಶ್‍ನಾಯ್ಕ ನಿಧನಕ್ಕೆ ಪತ್ರಕರ್ತರಾದ ಹೆಚ್.ಲಕ್ಷ್ಮಣ್, ನರೇನಹಳ್ಳಿ ಅರುಣ್‍ಕುಮಾರ್ ಹಾಗೂ ಬಂಜಾರ ಸಮಾಜದ ಆರ್.ನಿಂಗಾನಾಯ್ಕ ಇವರುಗಳು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...