ಬೆಂಗಳೂರು: ಇಂದು ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 62ನೇ ವಸಂತಕ್ಕೆ ಕಾಲಿಟ್ಟ ಡಿಕೆಶಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಸ್ಪೆಷಲ್ ವಿಶ್ ಎಲ್ಲರ ಗಮನ ಸೆಳೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗಿನ ಫೋಟೋ ಹಾಕಿ ‘ಮೈ ಡಿಯರ್ ಫ್ರೆಂಡ್’ ಎಂದು ಶುರು ಮಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿದ್ದು, ಮೈ ಡಿಯರ್ ಫ್ರೆಂಡ್ ಅಂಡ್ ಸಹದ್ಯೋಗಿ. ನಿಮ್ಮ ಶ್ರದ್ಧೆ, ಸಂಘಟನಾ ಕೌಶಲ್ಯ, ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ. ನಿಮಗೆ ಯಶಸ್ಸು, ಖುಷಿ ಸಿಗಲಿ ಎಂದು ಹಾರೈಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ನಿಮ್ಮ ಹಾರೈಕೆಗೆ ಧನ್ಯವಾದಗಳು.ನಾಡಿನ ಜನರ ಕಲ್ಯಾಣಕ್ಕಾಗಿ ಒಟ್ಟಿಗೆ ಶ್ರಮಿಸೋಣಾ ಎಂದಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು, ಕಾರ್ಯಕರ್ತರು ಎಲ್ಲರೂ ಶುಭಕೋರುತ್ತಿದ್ದಾರೆ. ರಾಜಕೀಯ ಗಣ್ಯರು ಸಹ ಶುಭಕೋರಿದ್ದಾರೆ. ಇನ್ನು ಸಂಸದ ಸುರೇಶ್ ಅಣ್ಣನಿಗಾಗಿ ಸ್ಪೆಷಲ್ ಸಾಂಗ್ ಒಂದನ್ನು ಎಡುಟ್ ಮಾಡಿಸಿ, ಫೋಟೋ ಹಾಕಿ ಶುಭಕೋರಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕನ್ನಡಿಗರ ಭರವಸೆಯ ನಾಯಕ, ಪ್ರೀತಿಯ ಸಹೋದರ ಡಿ.ಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಹಾಗೂ ಮತ್ತಷ್ಟು ಜನಸೇವೆ ಮಾಡಯವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ. ಸದ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಡಿಕೆ ಶಿವಕುಮಾರ್ ಅವರ ಬರ್ತ್ ಡೇ ಟ್ರೆಂಡಿಂಗ್ ನಲ್ಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












