Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

---Advertisement---

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ.

ಜ್ಯೂ. NTR, ಆರ್ ಆರ್ ಆರ್ ಸಿನಿಮಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದವರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡವರು. ಈ ಸಿನಿಮಾದಲ್ಲಿ ಖ್ಯಾತಿ ಪಡೆದ ಮೇಲೆ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ. ಜೊತೆಗೆ ಬೇರೆ ಬೇರೆ ಪ್ರಾಪರ್ಟಿ ಮೇಲೆ ಹಣ ಹೂಡಿಕೆ ಮಾಡುವ ಮೂಲಕ ಉಳಿತಾಯವನ್ನು ಮಾಡುತ್ತಿದ್ದಾರೆ. ಆದ್ರೆ 2003ರಲ್ಲಿ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಒಂದು ಸೈಟ್ ಖರೀದಿ ಮಾಡಿದ್ದರು. ಆ ಸೈಟ ವಿಚಾರಕ್ಕೆ ಈಗ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಕು ಗೀತಾ ಎಂಬುವವರಿಂದ 680 ಚದುರ ಗಜ ಭೂಮಿ ಖರೀದಿಸಿದ್ದರು. ಆದರೆ ಆ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಲವು ಬ್ಯಾಂಕ್ ಗಳು ಮುಂದಾಗಿವೆ. ಆ ಮಹಿಳೆ ನಕಲಿ ದಾಖಲೆಯನ್ನು ನೀಡಿ, ಜ್ಯೂ. ಎನ್ ಟಿ ಆರ್ ಗೆ ಭೂಮಿ ಮಾರಾಟ ಮಾಡಿದ್ದಾಳೆ. ಆ ಜಾಗವನ್ನು ಶ್ಯೂರಿಟಿಯಾಗಿಟ್ಟು ಹಲವು ಬ್ಯಾಂಕ್ ಗಳಲ್ಲಿ ಆ ಮಹಿಳೆ ಸಾಲ ಪಡೆದಿದ್ದಾಳೆ. ಸಾಲ ಇತ್ಯರ್ಥವಾಗದ ಕಾರಣ ಸಾಲ ಕೊಟ್ಟ ಬ್ಯಾಂಕ್ ಗಳು ಸಾಲ ವಸುಲಾತಿ ನ್ಯಾಯಮಂಡಳಿ ಮೊರೆ ಹೋಗಿದ್ದವು. ಇದರೊಂದಿಗೆ ನ್ಯಾಯಾಧೀಕರಣವು ಬ್ಯಾಂಕ್ ಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡಿತ್ತು. ಹಲವು ವರ್ಷಗಳಿಂದ ಈ ವಿವಾದ ಬಗೆ ಹರಿದಿಲ್ಲ. ಹೀಗಾಗಿ ಈ ಕೇಸ್ ಈಗ ಜ್ಯೂ.ಎನ್ಟಿಆರ್ ಗೆ ಸಂಕಷ್ಟ ತಂದೊಡ್ಡಿದ್ದು, ಗೀತಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...