ನವದೆಹಲಿ: ಇತ್ತೀಚೆಗಷ್ಟೇ ಕಂಗನಾಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿತ್ತು. ಕಂಗನಾ ಸ್ವಾತಂತ್ರ್ಯದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದಾಗಿ ಕಾಂಗ್ರೆಸ್ ಕ್ಯಾಂಪೃನ್ ಶುರು ಮಾಡಿತ್ತು. ಕಂಗನಾಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿ ವಾಪಾಸ್ ತೆಗೆದುಕೊಳ್ಳಿ ಎಂದು ಕೆಂದ್ರ ಸರ್ಕಾರಕ್ಕೆ ಒತ್ತಡ ಹೇರಿದ್ದರು. ಇದೀಗ ಕಂಗನಾರೇ ಸ್ವತಃ ಇದಕ್ಕೆ ಉತ್ತರ ನೀಡಿದ್ದು, ಪದ್ಮಶ್ರೀಯನ್ನ ತಾನೇ ವಾಪಾಸ್ ಮಾಡುವುದಾಗಿ ತಿಳಿಸಿದ್ದಾರೆ.
ಆದ್ರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದವರಿಗೆ ಒಂದಷ್ಟು ಪ್ರಶ್ನೆಗಳನ್ನ ಕೇಳಿದ್ದಾರೆ. 1947 ರಲ್ಲಿ ಬಂದದ್ದು ಸ್ವಾತಂತ್ರ್ಯ ಅಲ್ಲ ಬದಲಿಗೆ 2014ರಲ್ಲಿ ಪ್ರಧಾನಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಂಗನಾ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ವೊಂದನ್ನ ಹಾಕಿದ್ದಾರೆ.
ನಾನು ಪದ್ಮಶ್ರೀ ಪ್ರಶಸ್ತಿಯನ್ನ ವಾಪಾಸ್ಸು ನೀಡಲು ತಯಾರಿದ್ದೇನೆ. ಆದ್ರೆ 1947ರಲ್ಲಿ ಯಾವ ಸ್ವಾತಂತ್ರ್ಯ ಸಂಗ್ರಾಮ ಆಯ್ತು ಅನ್ನೋದನ್ನ ಬಿಡಿಸಿ ಹೇಳಬೇಕು. 1857ರ ದಂಗೆಯನ್ನು ಭಾರತೀಯ ಸ್ವಾತಂತ್ರ್ಯ ಸಂಗ್ರಾಮವೆಂದು ಕರೆಯುತ್ತಾರೆ. ಇದು ನನಗೆ ಗೊತ್ತಿರುವಂತದ್ದು.
ಈ ದೇಶಕ್ಕೆ ಸ್ವಾತಂತ್ರ್ಯ ಬಂದದ್ದು, ಸುಭಾಷ್ ಚಂದ್ರ ಬೋಸ್, ವೀರ ಸಾವರ್ಕರ್, ರಾಣಿ ಲಕ್ಷ್ಮೀಬಾಯಿ ನಾಯಕತ್ವದಲ್ಲಿ ಎಂದು ಬರೆದುಕೊಂಡಿದ್ದಾರೆ. 1947ರಲ್ಲಿ ಏನು ನಡೀತು ಎಂಬ ಬಗ್ಗೆ ಗೊತ್ತಿಲ್ಲ ಎಂದು ತನ್ನ ವಿವಾದಾತ್ಮಕ ಹೇಳಿಕೆಯನ್ನ ಸಮರ್ಥನೆ ಮಾಡಿಕೊಂಡಿದ್ದಾರೆ.