Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಟಾರ್ ಸಿನಿಮಾಗಳಿಲ್ಲದೆ ಥಿಯೇಟರ್ ಬಂದ್ ಮಾಡಲು ಹೊರಟಿದ್ದ ಫಿಲ್ಮ್ ಚೆಂಬರ್ ನಿರ್ಧಾರವೇನು..?

Facebook
Twitter
Telegram
WhatsApp

ಬೆಂಗಳೂರು: ಐಪಿಎಲ್ ಫೀವರ್, ಲೋಕಸಭಾ ಚುನಾವಣೆಯ ಹಿನ್ನೆಲೆ ಯಾವುದೇ ಬಿಗ್ ಸ್ಟಾರ್ ಗಳ ಸಿನಿಮಾಗಳು ರಿಲೀಸ್ ಆಗದ ಕಾರಣ ತಮಿಳುನಾಡಿನಲ್ಲಿ ಒಂದು ತಿಂಗಳುಗಳ ಕಾಲ ಥಿಯೇಟರ್ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡ ಫಿಲ್ಮ್ ಇಂಡಸ್ಟ್ರಿ ಬಗ್ಗೆಯೂ ನಿರ್ಧಾರ ಮಾಡುವುದಕ್ಕೆ ಇಂದು ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ ನಡೆದಿತ್ತು. ಆ ಸಭೆಯಲ್ಲಿ ಥಿಯೇಟರ್ ಮುಚ್ಚುವುದರಿಂದ ಯಾವುದೇ ಪದರಯೋಜನವಿಲ್ಲ, ಸ್ಟಾರ್ ನಟರ ಬಳಿ ಮನವಿ ಮಾಡಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ.

 

ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಫಿ ಪ್ರಿಯರಿಗೆ ಗುಡ್ ನ್ಯೂಸ್ | ಕಾಫಿ‌ ಕುಡಿಯುವವರ ಆಯುಷ್ಯ ಹೆಚ್ಚು : ಸಂಶೋಧನೆಯಲ್ಲಿ ಬಹಿರಂಗ…!

  ಸುದ್ದಿಒನ್ : ಕಾಫಿ ಪ್ರಿಯರಿಗೊಂದು ಗುಡ್ ನ್ಯೂಸ್. ಇತ್ತೀಚೆಗೆ ‘ಸೈನ್ಸ್ ಅಲರ್ಟ್’ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ.. ಕಾಫಿ ಕುಡಿಯುವವರ ಆಯುಷ್ಯ ಹೆಚ್ಚಂತೆ. ಕಾಫಿ ಕುಡಿಯದವರಿಗೆ ಹೋಲಿಸಿದರೆ, ಕಾಫಿ ಕುಡಿಯುವವರಿಗೆ ಸಾವಿನ ಪ್ರಮಾಣ

ಈ ರಾಶಿಯ ಗಂಡ ಹೆಂಡತಿ ಎಷ್ಟೇ ಜಗಳ ಮಾಡಿದರೂ ಮರುದಿನ ಏನೂ ನಡೆದಿಲ್ಲ ಎಂದು ನಗುನಗುತ್ತಾ ಸಂಸಾರದ ನೌಕೆ ಸಾಗಿಸುವಂತವರು.

ಈ ರಾಶಿಯ ಗಂಡ ಹೆಂಡತಿ ಎಷ್ಟೇ ಜಗಳ ಮಾಡಿದರೂ ಮರುದಿನ ಏನೂ ನಡೆದಿಲ್ಲ ಎಂದು ನಗುನಗುತ್ತಾ ಸಂಸಾರದ ನೌಕೆ ಸಾಗಿಸುವಂತವರು. ಬುಧವಾರ- ರಾಶಿ ಭವಿಷ್ಯ ಜೂನ್-26,2024 ಸೂರ್ಯೋದಯ: 05:48, ಸೂರ್ಯಾಸ್ತ : 06:49 ಶಾಲಿವಾಹನ

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

error: Content is protected !!