Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾದ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತ

---Advertisement---

ಈಗಷ್ಟೇ ಐಪಿಎಲ್ ಮುಗಿದಿದೆ. ಅದರಲ್ಲಿ ಕೆಕೆಆರ್ ಗೆಲುವು ಸಾಧಿಸಿ ಕಪ್ ಗೆದ್ದಿದೆ. ಈಗ ಎಲ್ಕರ ಚಿತ್ತ ಟಿ20 ಕಡೆಗೆ ನೆಟ್ಟಿದೆ. ಅದರಲ್ಲೂ ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾಗೆ ಮುಂದಿನ ಕೋಚ್ ಯಾರಾಗ್ತಾರೆ ಎಂಬ ಕುತೂಹಲವಿತ್ತು. ಇದೀಗ ಬಿಸಿಸಿಐ ಬಿಗ್ ಸರ್ಪೈಸ್ ನೀಡಿದೆ. ಮತ್ತೆ ಕನ್ನಡಿಗನನ್ನೇ ಆಯ್ಕೆ ಮಾಡುವ ಸಾಧ್ಯತೆ ಇದೆ.

 

ಸದ್ಯ ಟಿ20 ವಿಶ್ವಕಪ್​​ಗಾಗಿ ಟೀಮ್​ ಇಂಡಿಯಾ ತಂಡದ ಆಟಗಾರರು ತಯಾರಿಯಲ್ಲಿ ತೊಡಗಿದ್ದು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್​ ಆಯ್ಕೆ ಖಚಿತ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಟಿ20 ವಿಶ್ವಕಪ್​ವರೆಗೆ ಇದೆ. ಬಳಿಕ ಟೀಮ್​ ಇಂಡಿಯಾದ ಕೋಚ್​ ಆಗಿ ಗಂಭೀರ್​ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

ರಾಹುಲ್ ದ್ರಾವಿಡ್ ಅವಧಿ ಮುಗಿಯುತ್ತಿದ್ದಂತೆ ಹೊಸ ಕೋಚ್ ಆಯ್ಕೆ ಮಾಡಲು ಬಿಸಿಸಿಐ ನಿರ್ಧಾರ ಮಾಡಿತ್ತು. ಅದರಂತೆ ಅರ್ಜಿ ಕೂಡ ಕರೆಯಲಾಗಿತ್ತು. ಒಂದಷ್ಟು ಷರತ್ತುಗಳು ಕೂಡ ಅದರಲ್ಲಿ ಇದ್ದವು. ಇದೀಗ ಗೌತಮ್ ಗಂಭೀರ್ ರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment