Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ : ಶೇಖರಗೌಡ ಮಾಲಿ ಪಾಟೀಲ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್,ಚಿತ್ರದುರ್ಗ ಮೇ. 29 :  ಶಿಕ್ಷಣದಿಂದ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯವಿದೆ. ಶಿಕ್ಷಣವನ್ನು ಪಡೆದರೆ ಮಾತ್ರ ಜೀವನದಲ್ಲಿ ಮೇಲಕ್ಕೆ ಏರಲು ಸಾಧ್ಯವಿದೆ ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ರಾಜ್ಯಾಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲ್ ತಿಳಿಸಿದರು.

ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸಮಾಜದ ಸಂಘಟನೆಗಾಗಿ ಪ್ರವಾಸವನ್ನು ಮಾಡುವುದರ ಮೂಲಕ ಸಂಘಟಿಸಲಾಗುತ್ತಿದೆ, ಇದಕ್ಕೆ ನಮ್ಮ ಸಮಾಜದ ಭಾಂಧವರು ಸಹಾಯ ಮತ್ತು ಸಹಕಾರವನ್ನು ನೀಡಬೇಕಿದೆ, ಈಗಾಗಲೇ 18 ಜಿಲ್ಲೆಗಳಲ್ಲಿ ನಮ್ಮ ಸಮಾಜದ ಸಂಘಟನೆ ಇದೆ ಅಲ್ಲಿ ನಮ್ಮ ಸಮಾಜ ಬೆಳೆಯುತ್ತಿದೆ.

ಚಿತ್ರದುರ್ಗದಲ್ಲಿಯೂ ಸಹಾ ನಮ್ಮ ಸಮಾಜ ಉತ್ತಮವಾದ ಸಂಘಟನೆಯಾಗುತ್ತಿದೆ, ನಮ್ಮ ಸಮಾಜದೊಂದಿಗೆ ಇತರೆ ಸಮಾಜದವರನ್ನು ಸಹಾ ಜೊತೆಯಲ್ಲಿ ಕರೆದ್ಯೂಯಲಾಗುತ್ತಿದೆ, ನಮ್ಮ ಸಮಾಜದಲ್ಲಿನ ಬಡವರಿಗೆ ಸಹಾಯವನ್ನು ಮಾಡುವ ಮನೋಭಾವವನ್ನು ಬೆಳಸಿಕೊಳ್ಳುವಂತೆ ಕರೆ ನೀಡಿದರು.

ಹೇಮರೆಡ್ಡಿ ಮಲ್ಲಮ್ಮ ಸ್ವಾಧಿಯಾಗಿ ಸಮಾಜವನ್ನು ಮುನ್ನಡೆಸಿದ್ದಾರೆ. ಮಲ್ಲಿಕಾರ್ಜನನಲ್ಲಿ ನಮ್ಮ ಸಮಾಜದ ಪರವಾಗಿ ವರವನ್ನು ಪಡೆಯುವುದರ ಮೂಲಕ ದಾರಿ ದೀಪವಾಗಿದ್ದಾರೆ. ತನಗೆ ಕಿರುಕುಳವನ್ನು ನೀಡಿದವರಿಗೂ ಸಹಾ ಒಳ್ಳೆಯದಾಗಲಿ ಎಂದು ಭಗವಂತನಲ್ಲಿ ಕೇಳಿದ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಎಂದ ಅವರು, ಸಮಾಜದವತಿಯಿಂದ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜದ ಸಂಘಟನೆಯನ್ನು ಮಾಡಬೇಕಿದೆ.

ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಿದೆ, ಈ ಹಿನ್ನಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಿದೆ, ಕಲಿತರೆ ಮಾತ್ರ ನಮ್ಮ ಬದುಕು ಉತ್ತಮವಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ಪಾಟೀಲ್ ತಿಳಿಸಿದರು.

ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಗೌರವಾಧ್ಯಕ್ಷರಾದ ನಾಗೀರೆಡ್ಡಿ ಮಾತನಾಡಿ, ಹಿಂದಿನ ದಿನದಲ್ಲಿ ನಮ್ಮ ಸಮಾಜ ಕಳೆದು ಹೋಗುತ್ತಿತ್ತು ಆದರೆ ಈಗ ಸಮಾಜವನ್ನು ಸಂಘಟಿಸಲಾಗುತ್ತಿದೆ. ನಾವು ಇದುವರೆವಿಗೂ ಬೇರೆಯವರ ಆಶ್ರಯದಲ್ಲಿ ಇದ್ದವೆ ಆದರೆ ಈಗ ನಾವು ಸ್ವತಂತ್ರವಾಗಿ ನಮ್ಮದೇ ಸಮಾಜ ಇದೆ ಎಂದು ತಿಳಿದಿದ್ದು ಅದನ್ನು ಸಂಘಟಿಸಲಾಗುತ್ತಿದೆ ಎಂದ ಅವರು, ಮಲ್ಲಮ್ಮ 600 ವರ್ಷಗಳ ಹಿಂದೆಯೇ ನಮ್ಮ ಸಮಾಜವನ್ನು ಸಂಘಟಿಸುವುದರ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡಿದರು. ಮಲ್ಲಕಾರ್ಜನ ಪರಮ ಭಕ್ತೆಯಾಗಿ ಅತನನ್ನು ಸಾಕ್ಷಾತ್ಕಾರ ಮಾಡಿಸಿಕೊಂಡು ನಮ್ಮ ಸಮಾಜವನ್ನು ಮುನ್ನಡೆಸಿದ್ದಾರೆ. ನಮ್ಮಲ್ಲಿ ಶೈವ ಮತ್ತು ವೈಷ್ಣವ ಪಂಥವನ್ನು ನಾವು ಅನುಸರಿಸುತ್ತೇವೆ, ತಿರುಪತಿ ತಿಮ್ಮಪ್ಪ ನಮ್ಮ ಸಮಾಜದ ಮನದೇವರಾಗಿದ್ದಾರೆ, ಇದ್ದಲ್ಲದೆ ಮಲ್ಲಿಕಾರ್ಜನನ್ನು ಸಹಾ ಆರಾಧನೆ ಮಾಡುತ್ತೇವೆ ನಮ್ಮ ಮಕ್ಕಳಿಗೆ ಸಮಾಜದ ಬಗ್ಗೆ ತಿಳಿಸುವ ಕಾರ್ಯವನ್ನು ಮಾಡಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಅಧ್ಯಕ್ಷರಾದ ಚಿದಾನಂದಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಶಾಲಾ ತನಿಖಾಧಿಕಾರಿಗಳಾದ ಶಿವಪ್ರಸಾದ್ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರವರ ಬಗ್ಗೆ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಉತ್ತೀರ್ಣರಾದ ಸಮಾಜದ ಮಕ್ಕಳನ್ನು ಸನ್ಮಾನಿಸಲಾಯಿತು.

ಶ್ರೀಮತಿ ಗೀತಾ, ಜಯಶೀಲ, ರಶ್ಮಿ ಪ್ರಾರ್ಥಿಸಿದರೆ, ಮಲ್ಲಿಕಾರ್ಜನಯ್ಯ ಸ್ವಾಗತಿಸಿದರು, ಶಿವಾನಂದಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ್ ವಂದಿಸಿದರು. ನಾಗರಾಜ್ ಸಂಗಮ್ ಕಾರ್ಯಕ್ರಮ ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment