Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಇಲಾಖಾ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ: ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿ

Facebook
Twitter
Telegram
WhatsApp

ಚಿತ್ರದುರ್ಗ. ಮೇ.29: 2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಕೃಷಿ ಇಲಾಖೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಕ್ಕೆ ಪ್ರಥಮ ಸ್ಥಾನ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಈಚೆಗೆ ಬೆಂಗಳೂರಿನಲ್ಲಿ ಜರುಗಿದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಪ್ರಶಂಸನಾ ಪತ್ರ ನೀಡಿ ಪುರಸ್ಕರಿಸಲಾಗಿದೆ.


ಜಿಲ್ಲೆಗೆ ಕೃಷಿ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇಲಾಖೆಯ ವಿವಿಧ ಯೋಜನೆಗಳನ್ನು ಕಾಲಾನುಕಾಲಕ್ಕೆ ರೈತರಿಗೆ ತಲುಪಿಸಿ ತಾಂತ್ರಿಕ ಮಾಹಿತಿ ಒದಗಿಸಿ, ಬರಗಾಲದ ಪರಿಸ್ಥಿತಿಯಲ್ಲಿ ಇಳುವರಿ ಪಡೆದು, ಜೀವನ ನಿರ್ವಹಣೆಗೆ ಸುಲಲಿತಗೊಳಿಸಲು ರೈತರಿಗೆ ಭರವಸೆ ನೀಡಿದ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಎರಡನೇ ಅತ್ಯುತ್ತಮ ಜಿಲ್ಲೆಯೆಂದು ಪ್ರಶಸ್ತಿ ಪಡೆದಿದೆ.


“ನಾವು ಸತ್ತರೆ ಮಣ್ಣಿಗೆ, ಮಣ್ಣು ಸತ್ತರೆ ಎಲ್ಲಿಗೆ”, “ಮಣ್ಣಿನ ಆರೋಗ್ಯದಿಂದ ಬೆಳೆಗಳ ಆರೋಗ್ಯ – ನಮ್ಮ ಆರೋಗ್ಯ” ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಮಣ್ಣು ಅಭಿಯಾನ ಕಾರ್ಯಕ್ರಮದಡಿ ಮಣ್ಣು ಪರೀಕ್ಷೆ ಮಹತ್ವ, ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳ ಸಮರ್ಥ ಬಳಕೆ ಕುರಿತು ಸಕಾಲದಲ್ಲಿ ಮಾಹಿತಿ ನೀಡಿದ ಮಣ್ಣು ಆರೋಗ್ಯ ಕೇಂದ್ರ ಚಿತ್ರದುರ್ಗವು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಮಣ್ಣು ಹಾಗೂ ನೀರು ಸಂರಕ್ಷಣೆ ಕುರಿತು ಜಲಾನಯನ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ, ಕೃಷಿ ಹೊಂಡ, ಅರಣ್ಯ ಹಾಗೂ ತೋಟಗಾರಿಕೆ ಚಟುವಟುಕೆಗಳ ಮೂಲಕ ಮಣ್ಣು ಮತ್ತು ನೀರು ಸಂರಕ್ಷಣೆ ಮಾಡುವುದರ ಜೊತೆಗೆ ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಉತ್ತಮ ಪ್ರಗತಿ ಸಾಧಿಸಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಮತ್ತೊಂದು ಗರಿ ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗೆ ಭಾಜನರಾದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಜಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಉಪ ಕೃಷಿನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್ ಸೇರಿದಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು, ಮಣ್ಣು ಆರೋಗ್ಯ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

error: Content is protected !!