Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು…!

---Advertisement---

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗ ದಿಢೀರನೆ ಅನಾರೋಗ್ಯ ಉಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 94 ವರ್ಷ ವಯಸ್ಸಾಗಿದೆ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಇಂದು ಬೆಳಗ್ಗೆ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಿದ್ದಾರೆ. ಆದರೆ ಗಾಬರಿ ಪಡುವಂಥದ್ದು ಏನು ಆಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದಾರೆ. ಕಾರ್ಯಕರ್ತರು, ಬೆಂಬಲಿಗರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಏರ್ ಲಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment