Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್

---Advertisement---

ಆರ್ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಆರ್ಸಿಬಿಯ ಸ್ಟಾರ್ ಫಿನಿಶರ್ ಇದೀಗ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ತಮ್ಮ ನಿರ್ಧಾರ ಘೋಷಿಸಿದ್ದಾರೆ. ತನ್ನನ್ನು ಬೆಂಬಲಿಅಇದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ದಿನೇಶ್ ಕಾರ್ತಿಕ್, ಕಳೆದ ಕೆಲವು ದಿನಗಳಿಂದ ನನಗೆ ಸಿಗುತ್ತಿರುವ ಬೆಂಬಲ ಹಾಗೂ ಅಪಾರ ಪ್ರೀತಿಗೆ ನಾನು ಆಭಾರಿ. ನಾನು ಸಾಕಷ್ಟು ಯೋಚನೆ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದೇನೆ. ಮುಂದೆ ಎದುರಾಗುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಾಗಿದ್ದೇನೆ. ನನ್ನನ್ನು ಬೆಂಬಲಿಸಿದ ಕೋಚ್ ಗಳು, ಆಟಗಾರರು, ಸೆಲೆಕ್ಟರ್ಸ್, ಸಹ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಪೋಷಕರೇ ನನ್ನ ಸ್ಟ್ರೆಂಥ್. ಅವರ ಆಶೀರ್ವಾದವೇ ಇಲ್ಲದೆ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಿರಲಿಲ್ಲ ಎಂದು ಬರೆದಿದ್ದಾರೆ.

ಇದೇ ವೇಳೆ ಬೆನ್ನೆಲುಬಾಗಿ ನಿಂತ ತನ್ನ ಹೆಂಡತಿಗೂ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಬೆಂಬಲವಿಲ್ಲದೆ ಏನು ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಅಭಿಮಾನಿಗಳಿಗೂ ವಿಶೇಷವಾದ ಧನ್ಯವಾದ ತಿಳಿಸಿದ್ದಾರೆ. 2004 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಕಾಲಿಟ್ಟಿದ ದಿನೇಶ್ ಕಾರ್ತಿಕ್ ಅವರ ಸುಮಾರು 20 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣಕ್ಕೆ ಇಂದು ಫುಲ್​ ಸ್ಟಾಪ್ ಬಿದ್ದಿದೆ. ಎಲ್ಲಾ ಮಾದರಿಯ ಕ್ರಿಕೆಟ್ ಗೂ ದಿನೇಶ್ ಕಾರ್ತಿಕ್ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment