Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಾಹನ ಸವಾರರಿಗೆ ಶಾಕ್ :  ಟೋಲ್ ಶುಲ್ಕ ಹೆಚ್ಚಿಸಿದ NHAI

---Advertisement---

 

ಸುದ್ದಿಒನ್, ನವದೆಹಲಿ, ಜೂ.02  : ಭಾರತದಾದ್ಯಂತ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್ ತೆರಿಗೆಗಳನ್ನು ಹೆಚ್ಚಿಸಲಾಗಿದೆ. ಸರಾಸರಿ 5 ಪ್ರತಿಶತದಷ್ಟು ಟೋಲ್ ಶುಲ್ಕವನ್ನು NHAI ಹೆಚ್ಚಿಸಿದೆ. ಪ್ರತಿ ವರ್ಷ ಏಪ್ರಿಲ್ 1 ರಿಂದ ಟೋಲ್ ದರವನ್ನು ಶೇಕಡಾ 5 ರಷ್ಟು ಹೆಚ್ಚಿಸಲಾಗುತ್ತದೆ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಬೆಲೆ ಏರಿಕೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.

ಏಪ್ರಿಲ್ 1 ರಿಂದ ಟೋಲ್ ಶುಲ್ಕವನ್ನು ಹೆಚ್ಚಿಸಲು NHAI ನಿರ್ಧರಿಸಿತ್ತು ಆದರೆ, ಈ ನಿರ್ಧಾರವನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಚುನಾವಣಾ ಆಯೋಗದ ಗಮನಕ್ಕೆ ತಂದಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಶುಲ್ಕ ಏರಿಕೆ ನಿರ್ಧಾರವನ್ನು ಮುಂದೂಡುವಂತೆ ಚುನಾವಣಾ ಆಯೋಗ ಎನ್‌ಎಚ್‌ಎಐಗೆ ಸೂಚಿಸಿತ್ತು. ಆದರೆ ಇದೀಗ ಕೊನೆಯ ಹಂತದ ಮತದಾನ ಮುಗಿದಿದ್ದು, ಟೋಲ್ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿ NHAI ಆದೇಶ ಹೊರಡಿಸಿದೆ. ಟೋಲ್ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ” ಎಂದು ಎನ್‌ಎಚ್‌ಎಐ ತಿಳಿಸಿದೆ.

ಟೋಲ್ ತೆರಿಗೆಯು ಕೆಲವು ಅಂತರರಾಜ್ಯ ಎಕ್ಸ್‌ಪ್ರೆಸ್‌ವೇಗಳು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಮೂಲಕ ಹಾದುಹೋಗುವಾಗ ವಾಹನ ಚಾಲಕರು ಪಾವತಿಸಬೇಕಾದ ಶುಲ್ಕವಾಗಿದೆ. ಅವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಯಂತ್ರಣಕ್ಕೆ ಒಳಪಡುತ್ತವೆ. ಪಾದಚಾರಿಗಳಿಗೆ ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...