ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ಇದೆ. ಈ ಬಾರಿ ಮೂವರು ಸ್ಪರ್ಧೆ ಮಾಡಿ, ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಕೆರಳಿಸಿದ. ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಬಿಜೆಪಿಯಿಂದ ಬಂಡಾಯವೆದ್ದು ಕೆ. ಎಸ್.ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಇವತ್ತು ಎಲ್ಲರಿಗೂ ಒಂಥರ ಟೆನ್ಶನ್ ಶುರುವಾಗಿದೆ.

ಗೀತಾ ಶಿವರಾಜ್ಕುಮಾರ್ ಈ ಬಾರಿ ಗೆದ್ದೇ ಗೆಲ್ಲುತ್ತಾರೆ ಎಂಬ ಆತ್ಮವಿಶ್ವಾಸವನ್ನಿಟ್ಟುಕೊಂಡು ಇಡೀ ಚಿತ್ರರಂಗದ ನಿರ್ಮಾಪಕರೆಲ್ಲರೂ ಬೆಂಬಲ ನೀಡಿದ್ದರು. ಇಂದು ಮತ ಎಣಿಕೆ ಆರಂಭವಾಗಿದ್ದು, ಆರಂಭದಲ್ಲಿಯೇ ಗೀತಾ ಶಿವರಾಜ್ ಕುಮಾರ್ ಅವರಿಗೆ ಹಿನ್ನಡೆಯಾಗಿದೆ.
ಇನ್ನು ಕೆ.ಎಸ್.ಈಶ್ವರಪ್ಪ ಅವರು ಕೂಡ ಈ ಬಾರಿ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಆರಂಭದ ಎಣಿಕೆ ಸಂದರ್ಭದಲ್ಲಿಯೇ ಈಶ್ವರಪ್ಪ ಅವರಿಗೂ ಹಿನ್ನಡೆಯಾಗಿದೆ. ಬಿವೈ ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











