ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. 47065 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ ಗೆದ್ದು ಬೀಗಿದ್ದಾರೆ.
ಗೆಲುವಿನ ಸಂತಸದಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿ ಮೊದಲ ಆದ್ಯತೆ ನೀಡಲಾಗುವುದು. ಜನರ ಆಸೆ ಜಿಲ್ಲೆಯ ಅಭಿವೃದ್ಧಿ ಆಗಬೇಕೆಂದಿದೆ. ಇಲ್ಲಿನ ಬೇಕು ಬೇಡಿಕೆಗಳ ಬಗ್ಗೆ ಹಾಗೂ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿತು ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಏನೇನು ಸಿಗಬೇಕು ಅಂತಹ ಅಭಿವೃದ್ಧಿ ಕಾರ್ಯಗಳನ್ನು ತಂದು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ತಿಳಿಸಿದರು.
ಜಿಲ್ಲೆಗೆ ಹೊಸಬ ಆಗಿದ್ರು ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಹೊರಗಿನವರು ಸ್ಥಳೀಯರು ಎಂಬ ಚರ್ಚೆ ನಡುವೆ ಗೆಲುವು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾರಜೋಳ ಅವರು ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ ಮತದಾರರು ಮೂರನೇ ಬಾರಿಗೆ ಬಹುಮತಕ್ಕೆ ಅವಕಾಶ ನೀಡಿದ್ದಾರೆ. ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ಆಗ ಸಮಯ ಇರಲಿಲ್ಲ ನನಗೆ ನಾಮಪತ್ರ ಸಲ್ಲಿಕೆಗೆ ಮಾತ್ರ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯವಾಗಿತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಎನ್ನುವುದಿದೆ.
ಅಭಿವೃದ್ಧಿ ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಜಿಲ್ಲೆಗೆ ಅಭಿವೃದ್ಧಿ ಆಗಬೇಕು ಅದನ್ನು ಮಾಡ್ತೀನಿ ಎಂದು ಭರವಸೆ ವ್ಯಕ್ತಪಡಿಸಿದರು.