Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇವೇಗೌಡ್ರು ಯಾಕೆ ಹೋಗಿಲ್ಲ : ಪತ್ರದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಪ್ರಧಾನಿ

---Advertisement---

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ತಮಾಣವಚನ ಕಾರ್ಯಕ್ರಮ ನಡೆದಿದೆ. ಮಿತ್ರ ಪಕ್ಷದವರು ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾಜರಿದ್ದರು. ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಮಾಜಿ ಪ್ರಧಾನಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅದಕ್ಕೆ ಕಾರಣವೇನು ಎಂಬುದನ್ನು ಪತ್ರದ ಮೂಲಕ ತಿಳಿಸಿದ್ದಾರೆ.

‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ನಮ್ಮ ಪಕ್ಷದಿಂದ ಸಂಪೂರ್ಣ ಬೆಂಬಲವಿದೆ. ಈ ಲೋಕಸಭಾ ಚುನಾವಣೆಯೂ ಕುತೂಹಲಕಾರಿ ಫಲಿತಾಂಶ ನೀಡಿದ್ದು, ದೇಶದ ಪ್ರಜಾಪ್ರಭುತ್ವದ ಕಂಪನ್ನು ಸಾಬೀತು ಪಡಿಸಿದೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಅಪಖ್ಯಾತಿಗೊಳಿಸಲು ಕಾಂಗ್ರೆಸ್ ನ ಕೊಳಕು ಪ್ರಚಾರವನ್ನು ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಬಹಿರಂಗಪಡಿಸಿದೆ. ಅವರ ದುರಹಂಕಾರಕ್ಕೆ ದೇಶದ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದ ಭಾಗವಾಗಲು ನಾನು ಇಷ್ಟಪಡುತ್ತಿದ್ದೇನೆ. ಆದರೆ, ನನ್ನ ಆರೋಗ್ಯವು ದೆಹಲಿ ಪ್ರಯಾಣಿಸಲು ನನಗೆ ಅವಕಾಶ ನೀಡುತ್ತಿಲ್ಲ. ಆದರೂ, ನಿಮ್ಮ ಆತ್ಮೀಯ ಆಹ್ವಾನಕ್ಕಾಗಿ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರಕಾರಕ್ಕೆ ನನ್ನ ಪಕ್ಷವಾದ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಂತೆ ನಿಮ್ಮ ಕಾರ್ಯಸೂಚಿಯನ್ನು ಜನತೆಗೆ ತಲುಪಿಸಲು ಸಹಾಯ ಮಾಡುತ್ತೇವೆ. ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment