ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷ ಸರಳ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಕೃಷಿ ಖಾತೆಯ ನಿರೀಕ್ಷೆಯಲ್ಲಿದ್ದರು. ಆದರೆ ಕೇಂದ್ರ ಸಚಿವ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆಯನ್ನು ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದು, ಕೃಷಿ ಖಾತೆಯ ನಿರೀಕ್ಷೆ ಇತ್ತು. ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ಯೋಚನೆ ಮಾಡಿ ಖಾತೆ ನೀಡಿದ್ದಾರೆ. ಕನ್ನಡಿಗರ ಪರವಾಗಿ ಪ್ರಧಾನಿ ಮೋದೊ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನು ಗಮನಿಸಿ ಇಲಾಖೆಯನ್ನು ಮೋದಿ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಸಮಯ ವ್ಯರ್ಥ ಮಾಡದೆ ಕೆಲಸ ಮಾಡುತ್ತೇನೆ. ರೂಟ್ ಮ್ಯಾಪ್ ಸಿದ್ದ ಮಾಡಿ ಕೆಲಸ ಮಾಡುತ್ತೇನೆ.
ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಇದು ನನ್ನ ಜೀವನದಲ್ಲಿ ಅತಿ ದೊಡ್ಡ ಸವಾಲು ಇದು. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ. ನನ್ನದೆ ಕಲ್ಪನೆಯಲ್ಲಿ ಕೆಲಸಮಾಡಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ಕೆಲಸ ಮಾಡಬೇಕಿದೆ. ಕರ್ನಾಟಕ ಮಾತ್ರ ಅಂತ ಹೇಳುವುದಿಲ್ಲ. ದೇಶದಾದ್ಯಂತ ಸುತ್ತಾಡಿ ಕೆಲಸ ಮಾಡುತ್ತೇನೆ. ಬದಲಾವಣೆಯನ್ನು ತರುವುದಕ್ಕೆ ಬಯಸುತ್ತೇನೆ. ಇನ್ನು ಶೋಭಾ ಕರಂದ್ಲಾಜೆ ಹಾಗೂ ಪ್ರಹ್ಲಾದ್ ಜೋಶಿ ಅವರಿಗೂ ಒಳ್ಳೆ ಖಾತೆ ನೀಡಿದ್ದಾರೆ ಎಂದಿದ್ದಾರೆ.