Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ..!

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.15 :  ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48 (4) ರಲ್ಲಿ ನಡೆದಿದೆ.

ತಾಲ್ಲೂಕಿನ ಭರಮಸಾಗರದ ಚಿಕ್ಕಬೆನ್ನೂರು ಬಳಿ ಈ ದುರಂತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೃತರನ್ನು ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ
(28 ವರ್ಷ) ಮತ್ತು ಮಗು ಸೋಹನ್ (2 ವರ್ಷ)
ಗಾಯಗೊಂಡವರನ್ನು  ಶಿಲ್ಪ, ಸ್ವರ್ಣ ಜಾರ್ಜ್‌, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment