Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ಉಪೇಂದ್ರ ಏನಂದ್ರು..?

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ನ ಒಬ್ಬೊಬ್ಬರೇ ಅರೆಸ್ಟ್ ಆಗುತ್ತಿದ್ದಾರೆ. ಈ ಪ್ರಕರಣ ಸಂಬಂಧ ಸೆಲೆಬ್ರೆಟಿಗಳು ಕೂಡ ಮಾತನಾಡುತ್ತಿದ್ದಾರೆ. ನಿನ್ನೆ ಸುದೀಪ್ ಮಾತನಾಡಿದ್ದರು, ಈಗ ಉಪೇಂದ್ರ ಅವರು ಟ್ವೀಟ್ ಮಾಡಿ, ತನಿಖೆ ಬಗ್ಗೆ ಕೇಳಿದ್ದಾರೆ.

ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ……
ಯಾವುದೇ ಕೇಸ್ ಆದರೂ ಆ ಕೇಸ್ ನ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ).

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...