Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೂ  ಕೊಂಡೊಯ್ಯಬೇಕಾಗಿದೆ : ಡಾ|| ಬಿ.ರಾಜಶೇಖರಪ್ಪ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ನ.15) : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿಂದು ಕನ್ನಡ  ರಾಜ್ಯೋತ್ಸವ ಹಾಗೂ ಮಕ್ಕಳ  ದಿನಾಚರಣೆಯ  ಹಾಗೂ  ಕ್ನನಡ ವಿಷಯದಲ್ಲಿ 125/125 ಅಂಕ ಗಳಿಸಿದ  ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮವನ್ನು ಜಿಲ್ಲೆಯ ಹೆಸರಾಂತ ಸಾಹಿತಿ  ಇತಿಹಾಸ ತಜ್ಞ ಖ್ಯಾತ ಸಂಶೋಧಕರು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ನಿವೃತ್ತ ಪ್ರಾಚಾರ್ಯರಾದ ಡಾ|| ಬಿ.ರಾಜಶೇಖರಪ್ಪನವರು  ಉದ್ಘಾಟಿಸಿ ಅನಂತರ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬಳಸಬೇಕಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಇರುವ  ಈ ಭಾಷೆಯನ್ನು  ಉಳಿಸಿಕೊಂಡು  ಮುಂದಿನ ಪೀಳಿಗೆಗೆ  ಕೊಂಡೊಯ್ಯಬೇಕಾಗಿದೆ. ಇಂದಿನ ಕನ್ನಡ ಕುವರ/ಕುವರಿಯರಾದ ನೀವು   ಕನ್ನಡದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಹೆಚ್ಚು ಹೆಚ್ಚು  ಕನ್ನಡ ಪುಸ್ತಕಗಳನ್ನು ಓದಬೇಕು ಹಾಗಾದಾಗ ಮಾತ್ರ ಕನ್ನಡ ತನ್ನ ಆಸ್ತಿತ್ವವನ್ನು  ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.  ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ನಂತರ  2019-20 ಮತ್ತು 2020-21 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಕನ್ನಡ ವಿಷಯದಲ್ಲಿ 125/125 ಅಂಕ ಗಳಿಸಿದ  ವಿದ್ಯಾರ್ಥಿಗಳಿಗೆ  ಡಾ|| ಬಿ.ರಾಜಶೇಖರಪ್ಪನವರು  ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ  ಬಿ.ವಿಜಯ್ ಕುಮಾರ್ ರವರು  ಸನ್ಮಾನ ಮಾಡಿ ಗೌರವಿಸಿದರು.

ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯಕುಮಾರ್, ಕ್ಯಾಂಪಸ್ ಇಂಚಾರ್ಜ್ ಪೃಥ್ವಿಶ್ ಎಸ್. ಎಮ್,  ಮುಖ್ಯೋಪಾದ್ಯಾಯರಾದ ಸಂಪತ್ ಕುಮಾರ್ ಸಿ ಡಿ. ಹೆಡ್ ಕೋಆರ್ಡಿನೇಟರ್ ಬಸವರಾಜಯ್ಯ ಪಿ ಹಾಗೂ ಬೋಧಕ/ಬೋಧಕೇತರ ವೃಂದದವರು  ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು  ಭಾಗವಹಿಸಿದ್ದರು. ಕಾರ್ಯಕ್ರಮವನ್ನು  ಪಾತಲಿಂಗಪ್ಪ ಕೆ.ಎಸ್  ಅವರು ನಿರೂಪಿಸಿದರು. ಬಸವರಾಜ್ ಹೆಚ್ ಸ್ವಾಗತಿಸಿದರು. ಸುಚಿತ ಅವರು ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!