Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ : ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್ ಸೇರಿದಂತೆ ಆರು ಜನರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಅವರ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇಂದು ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕಳೆದ ಬಾರಿಯೇ ಕಸ್ಟಡಿ ಅಂತ್ಯವಾದ ವೇಳೆ ಪವಿತ್ರಾ ಹಾಗೂ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡುವುದಕ್ಕೆ ಮನವಿ ಮಾಡಿದ್ದರು. ಆದರೆ ಪೊಲೀಸರು ಸ್ಥಳ ಮಹಜರು, ತನಿಖೆ ಇದೆ ಅಂತ ಹೇಳಿ ಕಸ್ಟಡಿಗೆ ತೆಗೆದುಕೊಂಡಿದ್ದರು‌. ಆಗ ಐದು ದಿನಗಳ ಮೇರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಇಂದು ಎರಡನೇ ಅವಧಿ ಮುಗಿದ ಹಿನ್ನೆಲೆ ಸಂಜೆ ವೇಳೆಗೆ ಪೊಲೀಸರು ಕೋರ್ಟ್ ಮುಂದೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ಹಾಜರುಪಡಿಸಿತ್ತು. ನ್ಯಾಯಾಧೀಶರು ಎರಡು ಕಡೆಯ ವಾದ-ಪ್ರತಿವಾದವನ್ನು ಆಲಿಸಿದ್ದರು‌. ಇತ್ತ ರಿಮ್ಯಾಂಡ್ ಅರ್ಜಿಯಲ್ಲಿ ದರ್ಶನ್ ಹಾಗೂ ಆರು ಮಂದಿಯನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಲಾಗಿತ್ತು.

ಈ ಸಂಬಂಧ ಕೊಲೆ ಆರೋಪ ಇರುವ ದರ್ಶನ್, ವಿನಯ್, ಪ್ರದೂಶ್, ನಾಗರಾಜ, ಲಕ್ಷ್ಮಣ, ಧನರಾಜ್ ಎಂಬುವವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರಾ ಗೌಡ ಸೇರಿದಂತೆ ಆರು ಜನ ಜೈಲು ಪಾಲಾಗಿದ್ದಾರೆ. ಆರೋಪಿಗಳ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಹೀಗಾಗಿ ಮುಂದಿನ ತನಿಖೆಗಾಗಿ ಮತ್ತೆ ಕಸ್ಟಡಿಗೆ ನೀಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...