ಹುಬ್ಬಳ್ಳಿ: ಇತ್ತಿಚೆಗಷ್ಟೇ ನೀಟ್ ಪರೀಕ್ಷೆ ಮುಗಿದಿದೆ. ಈ ಪರೀಕ್ಷೆಯಲ್ಲೂ ಅನ್ಯಾಯವಾಗಿದೆ ಎಂದು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ವಿಚಾರ ಚರ್ಚೆಗೆ ಬಂದ ಮೇಲೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕ ಮಹೇಶ್ ಟೆಂಗಿನಕಾಯಿ ನೀಟ್ ಪರೀಕ್ಷೆಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜನರ ದಿಕ್ಜು ತಪ್ಪಿಸುವ ಕೆಲಸವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅನ್ಯಾಯ ಯಾಕೆ ಆಗುತ್ತದೆ. ಎಷ್ಟೋ ಜನ ರ್ಯಾಂಕ್ ಬರುತ್ತಾರೆ. ಸರ್ಕಾರಕ್ಕೆ ಯಾವುದೇ ಅಜೆಂಡಾ ಇಲ್ಲ. ಪ್ರಧಾನಿ ಮೋದಿ ಒಳ್ಳೆಯ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ನವರಿಗೆ ಮಾತನಾಡುವುದಕ್ಕೆ ಬೇರೆ ವಿಷಯವೇ ಇಲ್ಲ. ಸುದ್ದಿ ಸಿಗದೆ ಇದ್ದಾಗ ಹೀಗೆ ಸುಳ್ಳು ಆರೋಪಗಳನ್ನು ಹೊರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವೇಳೆ ಪೆಟ್ರೋಲ್-ಡಿಸೇಲ್ ದರ ಏರಿಕೆಯ ಬಗ್ಗೆಯೂ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಪೆಟ್ರೋಲ್-ಡಿಸೇಲ್ ದರ ಏರಿಕೆಯ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಜನರ ಒಂದು ಜೇಬಿನಿಂದ ತೆಗೆದುಕೊಂಡು ಇನ್ನು ಎರಡು ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಬೆಲೆ ಏರಿಕೆ ಮಾಡಿದೆ. ರಾಜ್ಯದಲ್ಲಿ ಹಣಕಾಸಿನ ವ್ಯವಸ್ಥೆ ಸಂಪೂರ್ಣವಾಹಿ ಹದಗೆಟ್ಟಿದೆ. ಅದಕ್ಕಾಗಿಯೇ ಈ ರೀತಿಯಾದಂತ ಹೇಳಿಕೆ ಕೊಡುತ್ತಿದ್ದಾರೆ. ತಕ್ಷಣ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.