Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಜೂನ್. 22 : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ ನಡೆದಿರುವುದರಿಂದ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ 187 ಕೋಟಿ ರೂ.ಗಳನ್ನು ಆಂಧ್ರದ ಚುನಾವಣೆಗೆ ಸಾಗಿಸಲಾಗಿದೆ. ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯದಿಂದ ಅನೇಕ ಮುಖಂಡರುಗಳು ಆಗಮಿಸಲಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಇವರುಗಳು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ.ಮುಖಂಡರುಗಳಾದ ಕೆ.ಟಿ.ಕುಮಾರಸ್ವಾಮಿ, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ದೇವರಾಜ್ ಹೊಸದುರ್ಗ, ನವೀನ್ ಚಳ್ಳಕೆರೆ, ಎಸ್ಟಿ.ಮೋರ್ಚಾ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯ ಪಠ್ಯಪುಸ್ತಕದ ವಿರುದ್ಧ ವೀರಶೈವರ ಅಸಮಾಧಾನ : ಯಾಕೆ ಗೊತ್ತಾ..?

ಬೆಂಗಳೂರು: 2024-25ರ ಶೈಕ್ಷಣಿಕ ವರ್ಷ ಈಗಾಗಲೇ ಶುರುವಾಗಿದೆ. ಶಿಕ್ಷಣ ಇಲಾಖೆಯಿಂದ ಈಗಾಗಲೇ ಪುಸ್ತಕಗಳ ವಿತರಣೆಯೂ ನಡೆದಿದೆ. ಇದೀಗ ಪುಸ್ತಕದಲ್ಲಿ ಆಗಿರುವ ಪ್ರಮಾದಕ್ಕೆ ವೀರಶೈವ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ

ಬಜರಂಗದಳ ಸೇವಾ ಸಪ್ತಾಹ : ತರಳಬಾಳು ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ನಗರದ ಹೊರವಲಯದ ತಮಟಗಲ್ಲು ರಸ್ತೆಯಲ್ಲಿರುವ ತರಳಬಾಳು ನಗರದ ಕಡ್ಲೆಬಟ್ಟಿ ಬಳಿ ಭಾನುವಾರ ಉಚಿತ ಆರೋಗ್ಯ ತಪಾಸಣಾ

ಗಾಡಿಗಳಿಗೆ ದರ್ಶನ್ ಖೈದಿ ನಂಬರ್ : ಕೇಸ್ ಹಾಕುವ ಎಚ್ಚರಿಕೆ ನೀಡಿದ ಟ್ರಾಫಿಕ್ ಪೊಲೀಸರು..!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಖೈದಿ ನಂಬರ್ 6106 ನೀಡಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಪೋರ್ಟ್ ಮಾಡುವುದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಂಬರ್

error: Content is protected !!