Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆಯಲ್ಲಿ ಶಿಕ್ಷಕನ ಮನೆಗೆ ನುಗ್ಗಿ ಚಾಕು ತೋರಿಸಿ ದರೋಡೆ ಮಾಡಿದ ಕಳ್ಳರು..!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ರಾತ್ರೋರಾತ್ರಿ ಮನೆಗೆ ನುಗ್ಗಿದ ಮೂವರು ಕಳ್ಳರು, ಮನೆಯಲ್ಲಿದ್ದ ದಂಪತಿಗೆ ಚಾಕು ತೋರಿಸಿ, ಬೆದರಿಕೆ ಹಾಕಿ, ಮಾರಣಾಂತಿಕ ಹಲ್ಲೆ ಮಾಡಿ, ಮನೆಯಲ್ಲಿದ್ದ ಒಡವೆ, ಹಣ ದೋಚಿರುವ ಘಟನೆ ಚಳ್ಳಕೆರೆ ನಗರದ ಹೊರವಲಯದಲ್ಲಿ ನಡೆದಿದೆ.

ಈರಣ್ಣ ಹಾಗೂ ರಾಧಾ ದಂಪತಿಯ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಈರಣ್ಣ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ನಿರ್ಮಲ ಲಾಡ್ಜ್ ಸಮೀಪ ಪೂಜಾ ಡಾಬ್ ಎದರು ಇರುವ ಬೃಂದಾವನ ಮನೆ ಇವರದ್ದು. ಹಿಂಭಾಗಲಿನಿಂದ ನುಗ್ಗಿದ್ದ ಕಳ್ಳರು ಬೇಕಾದ್ದನ್ನೆಲ್ಲಾ ಬಾಚಿಕೊಂಡು ಪರಾರಿಯಾಗಿದ್ದಾರೆ. ಶನಿವಾರ ರಾತ್ರಿ 10.40 ರ ಸಮಯದಲ್ಲಿ ಈ ಘಟನೆ ನಡೆದಿದೆ.

ಮನೆಯ ಹಿಂಭಾಗದ ಹಿಂಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಬೆಡ್ ರೂಮನಲ್ಲಿ ಮಲಗಿದ್ದ ಇಬ್ಬರ ದಂಪತಿಗಳನ್ನ ಚಾಕು ತೋರಿಸಿ ದೊಣ್ಣೆಯಿಂದ ಹಲ್ಲೆ ಮಾಡಿ ಮೈ ಮೇಲೆ ಹಾಕಿಕೊಂಡಿದ್ದ ಒವಡವೆಗಳನ್ನು ಹಾಗೂ ಬೀರುವಿನಲ್ಲಿದ್ದ ಹಣವನ್ನು ದೋಚಿ ಪೊಲೀಸರಿಗೆ ತಿಳಿಸಿದರೆ ಪ್ರಾಣ ತೆಗೆಯುತ್ತಿವೆ ಎಂದು ಪ್ರಾಣ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇನ್ನು ಅಕ್ಕ ಪಕ್ಕದ ಮನೆಯವರಿಗೆ ಕರೆ ಮಾಡಿದ ಶಿಕ್ಷಕರು ಅಕ್ಕ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆರ್ ಎಫ್ ದೇಸಾಯಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

 

ಇಂದು ಚಿತ್ರದುರ್ಗ ಜಿಲ್ಲಾ ಎಸ್ ಪಿ ಧರ್ಮೇಂದ್ರ ಕುಮಾರ್ ಮೀನಾ ಕಳ್ಳತನವಾದ ಮನೆಗೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಂಪತಿಗಳನ್ನು ಭೇಟಿ ಮಾಡಿ ಪ್ರಕರಣದ ಮಾಹಿತಿಯನ್ನು ಪಡೆದಿದ್ದಾರೆ. 4 ಪೊಲೀಸ್ ತಂಡಗಳನ್ನು ರಚನೆ ಮಾಡಿ ಕಳ್ಳರನ್ನು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment