Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೇಣುಕಾಸ್ವಾಮಿ ತಂದೆ-ತಾಯಿ : ಮಗಳ ಕೆಲಸಕ್ಕೆ ಮನವಿ

---Advertisement---

ಸುದ್ದಿಒನ್, ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಹದಿನೇಳು ಮಂದಿ ಜೈಲಿನಲ್ಲಿದ್ದಾರೆ.

ಈ ಹೈಪ್ರೊಫೈಲ್ ಕೇಸಿನಲ್ಲಿ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಎಲ್ಲರೂ ಶ್ಲಾಘಿಸಿದ್ದಾರೆ. ಅದರಲ್ಲೂ ಕೇಸ್ ಹ್ಯಾಂಡಲ್ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳಿಗೆ  ಪ್ರಶಂಸೆ ಸಿಕ್ಕಿದೆ. ಇದೀಗ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಮಾಡಿಕೊಂಡಿದ್ದಾರೆ.

ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಮನೆಗೆ ರೇಣುಕಾಸ್ವಾಮಿ ಒಬ್ಬನೇ ಮಗ. ಅಪೋಲೋ ಮೆಡಿಸನ್ ನಲ್ಲಿ ಕೆಲಸ ಮಾಡಿಕೊಂಡು ಮನೆ ನಿಭಾಯಿಸುತ್ತಿದ್ದ. ಹೆಂಡತಿ ಬೇರೆ ಗರ್ಭಿಣಿ. ಈಗ ಮನೆ ನೋಡಿಕೊಳ್ಳುವವರು ಯಾರು ಇಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲಸ ಕೇಳಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಚಲುವರಾಯ ಸ್ವಾಮಿ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಇತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...