ಚಿತ್ರದುರ್ಗ. ಜೂನ್.25: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.
ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 29ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು.
ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತಮ್ಮಮೊಂದಿಗೆ ತರಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











