Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ ಕಾಯಿನ್ ಕೇಸ್ : ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬಿಟ್ ಕಾಯಿನ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಗರ ವಿರುದ್ಧ ಸರಣಿ ಟ್ವೀಟ್ ಮಾಡುವ ವಾಗ್ದಾಳಿ ನಡೆಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು‌ @CMofKarnataka ಅವರನ್ನು ಒತ್ತಾಯಿಸುತ್ತೇನೆ. ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ.

ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ
ಸಣ್ಣ ಮಟ್ಟದ ಆರೋಪದ
ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ. @CMofKarnataka.

ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ. @CMofKarnataka

ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಈ ಬಗ್ಗೆ @CMofKarnataka
ಮತ್ತು ರಾಜ್ಯ ಗೃಹ ಸಚಿವರು ಮಾಹಿತಿ‌ ನೀಡಬೇಕು.

ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ
ಅವಲಂಬಿಸಿರುವ ‘ಬಿಳಿಕಾಲರ್ ಅಪರಾಧ’. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ ಅಂತ ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!