Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾವೇರಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ | 13 ಮಂದಿ ಮೃತ, ನಾಲ್ವರ ಸ್ಥಿತಿ ಗಂಭೀರ….!

---Advertisement---

 

ಹಾವೇರಿ, ಜೂನ್​ 28 : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದು, ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ.

ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ (4) ಈ ಭೀಕರ ರಸ್ತೆ  ಅಪಘಾತ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಘಟನೆಗೆ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ನಿದ್ದೆ ಮಂಪರಿನಲ್ಲಿ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಮೃತರನ್ನು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್​.ಎ.ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಟಿಟಿ ವಾಹನದಲ್ಲಿದ್ದ 15 ಮಂದಿ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ವಾಪಾಸಾಗುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತ ದುರ್ದೈವಿಗಳು.

ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment