Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯಗೆ ಮೀಟರ್ ಬಡ್ಡಿ ದಂಧೆಕೋರರ ಕಾಟ : ಪೊಲೀಸ್ ಠಾಣೆಗೆ ದೂರು..!

---Advertisement---

 

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಇವರದ್ದು. ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ, ಅವನೇ ಶ್ರೀಮನ್ನಾರಾಯಣ, ಅವತಾರ ಪುರುಷ 1 & 2 ಸಿನಿಮಾಗಳನ್ನು ನಿರ್ಮಾಣ ಮಾಡಿದವರು. ನಿರ್ಮಾಪಕನಾಗಿ ದೊಡ್ಡ ಹೆಸರನ್ನೇ ಪಡೆದುಕೊಂಡಿದ್ದಾರೆ. ಆದರೆ ಇದೀಗ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರಿಗೆ ಮೀಟರ್ ಬಡ್ಡಿ ದಂಧೆಕೋರ ಕಾಟ ಶುರುವಾಗಿದೆ.

ಬಡ್ಡಿ ದಂಧೆಕೋರರ ಕಾಟದಿಂದ ಬೇಸತ್ತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪುಷ್ಕರ್, ಹತ್ತಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ಪ್ರಶಸ್ತಿಯನ್ನು ಪಡೆದಿದ್ದಾರೆ. ಆದರ್ಶ್, ಹರ್ಷ, ಶಿವು ಹಾಗೂ ಹರ್ಷ ಡಿ. ಎಂಬುವವರಿಂದ ಕಾಟ ಶುರುವಾಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಕೊಟ್ಟ ಸಾಲಕ್ಕಿಂತ, ತೀರಿಸಿದ ಸಾಲಕ್ಕಿಂತ ಕೋಟಿ ಕೋಟಿ ಹಣ ಮತ್ತೆ ಕೇಳುತ್ತಿದ್ದಾರೆಂದು ದೂರು ನೀಡಿದ್ದಾರೆ.

ಪುಷ್ಕರ್‌ ಮಲ್ಲಿಕಾರ್ಜುನಯ್ಯ ಸಿನಿಮಾ ಮಾಡುವುದಕ್ಕೆ ಈ ಮೀಟರ್ ಬಡ್ಡಿಯವರಿಂದ ಐದು ಕೋಟಿ ಸಾಲ ಪಡೆದುಕೊಂಡಿದ್ದರಂತೆ. ಆದರೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳು ಸೋಲು ಕಂಡಿವೆ. ಹೀಗಾಗಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಆದರೂ ಬಡ್ಡಿಗಿಡ್ಡಿ ಸೇರಿ ತೆಗೆದುಕೊಂಡ ಐದು ಕೋಟಿಗೆ ಹನ್ನೊಂದು ಕೋಟಿ ಕಟ್ಟಿದ್ದಾರಂತೆ. ಇನ್ನೂ ಹದಿಮೂರು ಕೋಟಿ ಹಣ ಕಟ್ಟು ಎಂದು ಹಿಂಸೆ ಕೊಡುತ್ತಿದ್ದಾರಂತೆ. ಹಣ ಕಟ್ಟದೇ ಇದ್ದಾಗ ಹುಡುಗರನ್ನು ಕಳುಹಿಸಿ ಬೆದರಿಕೆ ಹಾಕಿದ್ದಾರಂತೆ. ಈ ಸಂಬಂಧ ಇದೀಗ ಪುಷ್ಕರ್ ಮಲ್ಲಿಕಾರ್ಜುನಯ್ಯ ದೂರು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment