ವಾಲ್ಮೀಕಿ ನಿಗಮದ ಹಗರಣ: ಸಿಎಂ ಮನೆಗೆ ಜುಲೈ 3ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ..!

suddionenews
1 Min Read

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೃಹತ್ ಹಗರಣ ನಡೆದಿದ್ದು, ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ಬಿ.ನಾಗೇಂದ್ರ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಸಂಬಂಧಪಟ್ಟವರನ್ನು ಅರೆಸ್ಟ್ ಮಾಡಿ ಎಸ್ಐಟಿ ತನಿಖೆ ಕೂಡ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 3ರಂದು ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬಿಜೆಪಿಯ ತೀವ್ರ ಹೋರಾಟದ ಬಳಿಕ ಸಚುವ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಎಸ್ಐಟಿ ಇಲ್ಲಿಯವರೆಗೂ ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ‌. ಡಾ.ಶರಣ ಪ್ರಕಾಶ್, ನಿಗಮದ ಅಧ್ಯಕ್ಷ ದದ್ದಲ್, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೂ ರಾಜೀನಾಮೆ ನೀಡಬೇಕಾಗುತ್ತದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತದ ಅಂದರೆ 187 ಕೋಟಿ ರೂಪಾಯಿ ಹಗರಣ ನಡೆಯಲು ಹೇಗೆ ಸಾಧ್ಯವಾಯ್ತು ಎಂದಿದ್ದಾರೆ.

ಇನ್ನು ನಿನ್ನೆ ಕೂಡ ಈ ಪ್ರಕರಣ ಸಂಬಂಧ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತುಗೆ ಹಾಕಲಾಗಿದೆ. ಈ ಹಗರಣದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಇನ್ನು ಚಂದ್ರಶೇಖರ್ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಹಲವು ಅಂಶಗಳಿವೆ. ರಾಜ್ಯ ಸರ್ಕಾರ ಆ ಅಂಶದ ಬಗ್ಗೆ ಗಮನ ಕೊಡುತ್ತಿಲ್ಲ ಎಂದು ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *