ಸುದ್ದಿಒನ್ : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದೆ. ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಅವರನ್ನು ತುರ್ತು ಚಿಕಿತ್ಸೆಗೆ ಒಳಪಡಿಸಲಾಯಿತು. ಹಿರಿಯ ನರರೋಗ ತಜ್ಞ ಡಾ ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಅಡ್ವಾಣಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ರಾತ್ರಿ 9 ಗಂಟೆ ಸುಮಾರಿಗೆ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು.
96 ವರ್ಷದ ಭಾರತ ರತ್ನ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಒಂದು ವಾರದ ನಂತರ ಬುಧವಾರ ರಾತ್ರಿ 10.30 ಕ್ಕೆ ಮತ್ತೊಮ್ಮೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಮೂತ್ರಶಾಸ್ತ್ರ ವಿಭಾಗಕ್ಕೆ ದಾಖಲಾಗಿದ್ದಾರೆ.











