Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಯುವ-ಶ್ರೀದೇವಿ ಡಿವೋರ್ಸ್ ಅರ್ಜಿ ವಿಚಾರಣೆ : ಕೋರ್ಟ್ ಗೆ ಹೋಗುವ ಮುನ್ನ ಶ್ರೀದೇವಿ ಪೋಸ್ಟ್

Facebook
Twitter
Telegram
WhatsApp

ಬೆಂಗಳೂರು: ದೊಡ್ಮನೆಯ ಕುಡಿ ಯುವ ರಾಜ್‍ಕುಮಾರ್ ದಾಂಪತ್ಯ ಜೀವನ ಅಂತ್ಯವಾಗುವ ಸಮಯವಿದು. ಇಂದು ಕೋರ್ಟ್ ನಲ್ಲಿ ನಿರ್ಣಾಯಕ ದಿನವಾಗಿದೆ. ಜೂನ್ 6 ರಂದು ಯುವ ರಾಜ್‍ಕುಮಾರ್ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಯುವ ರಾಜ್‍ಕುಮಾರ್ ಹಾಗೂ ಶ್ರೀದೇವಿ ಇಬ್ಬರು ಕೋರ್ಟ್ ಗೆ ಹಾಜರಾಗಲಿದ್ದಾರೆ.

ಕೋರ್ಟ್ ಗೆ ತೆರಳುವುದಕ್ಕೂ ಮುನ್ನ ಶ್ರೀದೇವಿ ಭೈರಪ್ಪ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ‘ಕಳೆದ 15 ದಿನ ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆಗೆ ಇದ್ದಾಗ ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ ತ್ಯಂತ ಸೂಕ್ಷ್ಮ ಹಾಗೂ ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಕಳೆದ ಏಳು ತಿಂಗಳು ತೀವ್ರ ಒತ್ತಡ ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಿತ್ರರಂಗದ ಬಂಧುಗಳು, ಅನ್ಯಾಯದ ಧ್ವನಿ ಎತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ನನಗೆ ಸಾಂತ್ವನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು, ನ್ಯಾಯದ ಪರ ಹೋರಾಡಲು ನೀವೆಲ್ಲರು ಸಹಾಯ ಮಾಡಿದ್ದೀರಿ. ನಿಮ್ಮ ಋಣ ತೀರಿಸಲು ನನಗೆ ದೇವರು ಅವಕಾಶ ಕೊಡಲೆಂದು ಪ್ರಾರ್ಥಿಸುತ್ತೇನೆ. ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ’ ಎಂದು ಶ್ರೀದೇವಿ ಭೈರಪ್ಪ ಸುಧೀರ್ಘವಾಗಿ ಬರೆದುಕೊಂಡಿದ್ದಾರೆ. ಇಂದು ಫ್ಯಾಮಿಲಿ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ : ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ

error: Content is protected !!