ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ನಟ ದರ್ಶನ್ ಅವರಿಗೆ ಮತ್ತೆ ಜೈಲುವಾಸ ವಿಸ್ತರಣೆಯಾಗಿದೆ. ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಕೊಲೆ ಕೇಸಿನಲ್ಲಿ ಬಂಧನವಾಗಿದ್ದ ದರ್ಶನ್ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಇನ್ನು ಹದಿನಾಲ್ಕು ದಿನಗಳ ಕಾಲ ದರ್ಶನ್ ಮತ್ತು ಸಂಗಡಿಗರು ಜೈಲಿನಲ್ಲೇ ಇರಬೇಕಾಗಿದೆ.
ಕಳೆದ ಬಾರಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಅವಧಿ ಇಂದಿಗೆ ಮುಕ್ತಾಯವಾದ ಬೆನ್ನಲ್ಲೇ ಇಂದು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ತುಮಕೂರು ಹಾಗೂ ಪರಪ್ಪನ ಅಗ್ರಹಾರದಲ್ಲಿರುವ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇನ್ನು ಪವಿತ್ರಾ ಗೌಡ ಅವರನ್ನು ಪ್ರತ್ಯೇಕವಾಗಿ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಮುಂದಿನ14 ದಿನಗಳ ಕಾಲ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಶ್ಲೀಲ ಮೆಸೇಜ್ ಹಾಗೂ ಫೋಟೋ ಕಳುಹಿಸುತ್ತಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಎತ್ತಾಕಿಕೊಂಡು ಬಂದು ದರ್ಶನ್ ಅಂಡ್ ಗ್ಯಾಂಗ್ ಹೊಡೆದಿದ್ದಾರೆ. ಅದು ಕೊಲೆಯ ಹಂತಕ್ಕೆ ತಲುಪಿದ್ದು ಈಗ ಹದಿನೇಳು ಮಂದಿ ಜೈಲುವಾಸದಲ್ಲಿದ್ದಾರೆ. ದರ್ಶನ್ ಅವರನ್ನು ಬಿಡಿಸಲು ಪತ್ನಿ ಪ್ರಯತ್ನ ಪಡುತ್ತಿದ್ದಾರೆ. ಪವಿತ್ರಾ ಗೌಡರನ್ನು ನೋಡಲು ಅಪ್ಪ, ಅಮ್ಮ, ತಮ್ಮನು ಬರುತ್ತಿದ್ದಾರೆ. ಪವಿತ್ರಾ ಅವರನ್ನು ಕೂಡ ಪೋಷಕರು ಬಿಡಿಸಬಹುದು. ಆದರೆ ಇಲ್ಲಿ ಮಧ್ಯದಲ್ಲಿ ತಗಲಾಕಿಕೊಂಡ ಚಿತ್ರದುರ್ಗದ ಹುಡುಗರ ಗತಿ ಏನು ಎಂಬುದೇ ಕುಟುಂಬಸ್ಥರ ಪ್ರಶ್ನೆಯಾಗಿದೆ. ಈಗಾಗಲೇA5 ಆರೋಪಿ ನಂದೀಶ್ ಅವರ ಅಕ್ಕ ಕಣ್ಣೀರು ಹಾಕುತ್ತಾ ಸಮಸ್ಯೆ ಹೇಳಿಕೊಂಡಿದ್ದಾರೆ. ಅವರಿಗೆ ವಕೀಲರನ್ನು ಸಹ ನೇಮಿಸಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್