ಚಿತ್ರದುರ್ಗ. ಜುಲೈ.06: 2024-25ನೇ ಸಾಲಿಗೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಇದೇ ಏಪ್ರಿಲ್ ತಿಂಗಳಲ್ಲಿ ಪಾವತಿಸಿದವರಿಗೆ ಸರ್ಕಾರದ ಆದೇಶದ ಅನ್ವಯ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿರುವುದುನ್ನು ಜುಲೈ 31 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ.
ಈ ಪ್ರಯುಕ್ತ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಜುಲೈ 31 ರೊಳಗಾಗಿ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಿ, ಶೇ. 5ರಷ್ಟು ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈಗಾಗಲೇ 2024-25ನೇ ಸಾಲಿಗೆ ಮೇ ಮತ್ತು ಜೂನ್ ಮಾಹೆಯಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯದೇ ಪೂರ್ಣ ಪ್ರಮಾಣದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿರುವ ಆಸ್ತಿ ಮಾಲೀಕರು, ಚಲನ್ ಮತ್ತು ವಿವರದ ಪಟ್ಟಿ ತೋರಿಸಿ ಮುಂದಿನ ಆರ್ಥಿಕ ವರ್ಷ ಅಂದರೆ, 2025-26ನೇ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















