Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ : ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.07  : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೊಸದುರ್ಗ ಭಗೀರಥ ಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಉಪ್ಪಾರ ಜನಾಂಗಕ್ಕೆ ಕರೆ ನೀಡಿದರು.

ಮೆದೇಹಳ್ಳಿ ರಸ್ತೆಯಲ್ಲಿರುವ ಶಿವಮೂರ್ತಿ ಶಿವಾಚಾರ್ಯ ಲೇಔಟ್ ಪಕ್ಕದ ಮೈದಾನದಲ್ಲಿ ತಾಲ್ಲೂಕು ಉಪ್ಪಾರ ಸಂಘದಿಂದ ಭಾನುವಾರ ಏರ್ಪಡಿಸಲಾಗಿದ್ದ ಭಗೀರಥ ಜಯಂತಿ, ತಾಲ್ಲೂಕು ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬಡತನ, ಅನಕ್ಷರತೆ, ಮೌಢ್ಯತೆಯಿರುವ ಸಮಾಜ ಮುಂದೆ ಬರಲು ಸಾಧ್ಯವಿಲ್ಲ. ಶಿಕ್ಷಣದಿಂದ ಮಾತ್ರ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕøತಿ, ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ವಿದ್ಯಾವಂತರಾಗುವ ಮೂಲಕ ಜೀವನದಲ್ಲಿ ಸುಧಾರಣೆ ಕಂಡುಕೊಳ್ಳಬಹುದು. ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ ಎಂದು ಹೇಳಿದರು.


ತಂದೆ-ತಾಯಿಗಳು ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ಕೊಡಿಸಿದರೆ ಅದುವೆ ನಿಜವಾದ ಸಂಪತ್ತು. ಶಿಕ್ಷಣದಿಂದ ಮೃಗೀಯ ಗುಣ ಹೋಗಲಾಡಿಸಿ ಮನುಷ್ಯತ್ವ ಬೆಳೆಸಿಕೊಳ್ಳಬಹುದು. ಸತ್ಯ, ಧರ್ಮ, ನ್ಯಾಯವನ್ನು ಜೀವನದಲ್ಲಿ ಅಳವಡಿಸಿಕೊಂಡವರಿಗೆ ಮನುಷ್ಯರೆಂದು ಹೇಳುತ್ತಾರೆ. ಯಾರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುತ್ತಾರೋ ಅಂತಹವರು ಗೌರವಕ್ಕೆ ಪಾತ್ರರಾಗುತ್ತಾರೆ. ಧರ್ಮ ಕಾರ್ಯ, ಪರೋಪಕಾರದಲ್ಲಿ ತೊಡಗಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಉಪ್ಪಾರ ಸಮಾಜಕ್ಕೆ ತಿಳಿಸಿದರು.

ಅಸಾಧ್ಯವಾದುದನ್ನು ಸಾಧನೆ ಮಾಡಿದರೆ ಭಗೀರಥ ಅಪ್ರಯತ್ನವಾಗುತ್ತದೆ. ಕಠಿಣ ತಪಸ್ಸಿನ ಮೂಲಕ ಭಗೀರಥರು ಗಂಗೆಯನ್ನು ಧರೆಗಿಳಿಸಿದರು. ಅಂತಹ ಶಕ್ತಿ ಅವರಲ್ಲಿತ್ತು. ಹಾಗಾಗಿ ಉಪ್ಪಾರ ಜನಾಂಗ ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವುದು ಇಲ್ಲ. ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಹೇಳಿರುವಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಶಕ್ತಿಯಿದೆ ಎಂದರು.

ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿಗಳು ಮಾತನಾಡಿ ಉಪ್ಪಾರ ಜನಾಂಗದವರು ಮಕ್ಕಳನ್ನು ಬುದ್ದಿವಂತರಾನ್ನಾಗಿ ಮಾಡಬೇಕಾದರೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಸಂಸ್ಕಾರ, ಸಂಸ್ಕøತಿ, ಮಾನವೀಯ ಗುಣ, ಗುರು-ಹಿರಿಯರು, ತಂದೆ-ತಾಯಿಗಳನ್ನು ಗೌರವಿಸುವುದನ್ನು ಮಕ್ಕಳು ಕಲಿಯುತ್ತಾರೆ. ವಿನಯವಿಲ್ಲದ ಶಿಕ್ಷಣದಿಂದ ಏನೂ ಪ್ರಯೋಜನವಿಲ್ಲ. ಇತ್ತೀಚಿನ ದಿನಗಳಲ್ಲಿ ವೃದ್ದಾಶ್ರಮಗಳು ಜಾಸ್ತಿಯಾಗುತ್ತಿರುವುದು ನೋವಿನ ಸಂಗತಿ. ಮಕ್ಕಳು ವಯಸ್ಸಾದ ಅಪ್ಪ-ಅಮ್ಮನನ್ನು ಜೋಪಾನವಾಗಿ ನೋಡಿಕೊಳ್ಳಬೇಕು ಎಂದು ಹೇಳಿದರು.


ಭಗೀರಥರಿಗೆ ಅಗಾಧವಾದ ಶಕ್ತಿಯಿದ್ದುದರಿಂದ ಕಠಿಣ ತಪಸ್ಸಿನಿಂದ ಗಂಗೆಯನ್ನು ಧರೆಗಿಳಿಸಿದರು. ಅಂತಹ ಪರಂಪರೆಗೆ ಸೇರಿರುವ ಉಪ್ಪಾರ ಜನಾಂಗ ಸಾಧನೆಯ ಮೂಲಕ ಜೀವನದಲ್ಲಿ ಯಶಸ್ಸು ಕಂಡುಕೊಳ್ಳಬಹುದು ಎಂದು ತಿಳಿಸಿದರು.

ಚಳ್ಳಕೆರೆ ನರಹರಿ ಆಶ್ರಮದ ರಾಜಾರಾಂ ಗುರುಗಳು ಮಾತನಾಡುತ್ತ ತಾಯಿ, ಪಿತೃ, ಆಚಾರ್ಯ ಹಾಗೂ ಸಮಾಜದ ಋಣವನ್ನು ಯಾರಿಂದಲೂ ತೀರಿಸಲು ಆಗುವುದಿಲ್ಲ. ಹುಟ್ಟಿದ ಪ್ರತಿಯೊಬ್ಬರು ಈ ನಾಲ್ಕು ಋಣಗಳನ್ನು ತೀರಿಸಲೇಬೇಕು. ತಂದೆ-ತಾಯಿಗಳನ್ನು ಮಕ್ಕಳು ಪ್ರೀತಿಯಿಂದ ನೋಡಿಕೊಂಡರೆ ಅದುವೆ ನೀವುಗಳು ಅವರಿಗೆ ಕೊಡುವ ಗೌರವ. ಮುಪ್ಪಿನ ಕಾಲದಲ್ಲಿ ಹೆತ್ತವರನ್ನು ದೂರ ಮಾಡುವ ಸಂಸ್ಕøತಿ ಮಕ್ಕಳಿಗೆ ಒಳ್ಳೆಯದಲ್ಲ. ಉಪ್ಪಾರ ಜನಾಂಗ ಸದೃಢವಾಗಿ ಬೆಳೆಯಬೇಕಾದರೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಎಂದು ಹೇಳಿದರು.
ತಾಲ್ಲೂಕು ಉಪ್ಪಾರ ಸಂಘದ ಅಧ್ಯಕ್ಷ ಎಸ್.ಸಿದ್ದೇಶ್ವರ ಅಧ್ಯಕ್ಷತೆ ವಹಿಸಿದ್ದರು.

ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಎನ್.ವೀರೇಶ್, ತಾಲ್ಲೂಕು ಸಂಘದ ಉಪಾಧ್ಯಕ್ಷ ಎನ್.ಎಸ್.ರವಿ, ಕಾರ್ಯದರ್ಶಿ ಟಿ.ಈಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಮಹೇಶ್, ಖಜಾಂಚಿ ಅಜ್ಜಪ್ಪ, ಬಸವರಾಜ್, ತಿಮ್ಮಣ್ಣ, ಜಿಲ್ಲಾ ಉಪ್ಪಾರ ಸಮಾಜದ ಮಾಜಿ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜಿ.ಜಯರಾಮರೆಡ್ಡಿ ಸೇರಿದಂತೆ ಉಪ್ಪಾರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಹಾಗೂ ಉಪ್ಪಾರ ಸಮಾಜದಲ್ಲಿ ಸಾಧನೆಗೈದಿರುವವರನ್ನು ಗುರುತಿಸಿ ಸನ್ಮಾನಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

  ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ

ಹೀಟರ್ ಬಳಸದೆಯೇ‌ಚಳಿಗಾಲದಲ್ಲಿ ಮನೆಯನ್ನು ಬೆಚ್ಚಗಿರುವಂತೆ ಮಾಡಬಹುದು..!

ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಅತ್ಯಧಿಕವಾಗಿ ಸುರಿದ ಪರಿಣಾಮ ಈ ಬಾರಿ ಚಳಿಯೂ ಜಾಸ್ತಿ ಇರಲಿದೆ. ಕಳೆದ ವರ್ಷಕ್ಕಿಂತ ಅತ್ಯಧಿಕವಾಗಿರಲಿದೆ. ಈಗಾಗಲೇ ಚಳಿಗಾಲ ಶುರುವಾಗಿದೆ ಕೂಡ. ಚಳಿಗಾಲದಲ್ಲಿ ಮನೆಯೆಲ್ಲಾ ತಂಪಾಗಿರುತ್ತದೆ. ಕೆಲವೊಬ್ಬರಿಗೆ

error: Content is protected !!