Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನರ್ಹರ ಬಿಪಿಎಲ್ ಕಾರ್ಡು ರದ್ದತಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ಅಕ್ಕಿ ಸಿಗಲಿ ಎಂಬ ಕಾರಣಕ್ಕೆ ಬಿಪಿಎಲ್ ಕಾರ್ಡು ಮಾಡಿಸಲಾಗಿದೆ. ಆದರೆ, ಹಲವು ವರ್ಷಗಳಿಂದಾನೂ ಬಡವರಿಗಿಂತ ಅನುಕೂಲಸ್ಥರೆ ಬಿಪಿಎಲ್ ಕಾರ್ಡ್ ಹೊಂದಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಇದೀಗ ಆ ರೀತಿ ಅನರ್ಹರ ಬಿಪಿಎಲ್ ಕಾರ್ಡನ್ನು ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಲಾಗಿದೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ್ದು, ರಾಜ್ಯದಲ್ಲಿ ಶೇಕಡ 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ನೀತಿ ಆಯೋಗದ ಪ್ರಕಾರ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡ 5.67ರಷ್ಟು ಇರಬೇಕು. ಆದರೆ ರಾಜ್ಯದಲ್ಲಿ 1.27 ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಅನರ್ಹ ಬಿಪಿಎಲ್ ಕಾರ್ಡ್ ರದ್ದು ಪಡಿಸಿ, ಅರ್ಹರಿಗೆ ನೀಡಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರಗಳನ್ನು ಒದಗಿಸಬೇಕು ಎಂದರು.

ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಬರ ನಡುವೆ ರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ‌. 783 ಕೋಟಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ. ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೂ ಶೇಕಡ 7ರಷ್ಟು ಮಳೆಯಾಗಿದೆ. ಈ ಬಾರಿ ಮಳೆ ಹೆಚ್ಚಾಗುವ ಕಾರಣ ಅತಿವೃಷ್ಟಿ ಹೆಚ್ಚಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಮಳೆಯಿಂದಾಗಿ ಪ್ರಾಣಹಾನಿ ತಪ್ಪಿಸುವುದು ಆದ್ಯತೆಯಾಗಿದೆ. 27 ಜಿಲ್ಲೆಗಳು 177 ತಾಲೂಕುಗಳು, 1247 ಗ್ರಾಮ ಪಂಚಾಯತಿಗಳಲ್ಲಿ ಅತಿವೃಷ್ಟಿಗೆ ಹಾನಿಗೊಳಗಾಗುವುದನ್ನು ಗುರುತಿಸಲಾಗಿದೆ. ಪ್ರತಿ ಕಡೆಯಲ್ಲೂ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಆಶಾಕಿರಣ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ : ಕಳೆದ 13 ವರ್ಷದಲ್ಲಿ 800 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಸುದ್ದಿಒನ್, ಚಿತ್ರದುರ್ಗ ಅ.06 : ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ನಮ್ಮ ಸಂಸ್ಥೆಯ ಗುರಿಯಾಗಿದೆ. ಇಲ್ಲಿ ಸಹಾಯ ಪಡೆದವರು ಮುಂದಿನ ದಿನದಲ್ಲಿ ಬೇರೆಯವರಿಗೆ ಸಹಾಯವನ್ನು ಮಾಡುವುದರ ಮೂಲಕ ಸಮಾಜದ ಋಣವನ್ನು ತೀರಿಸುವಂತೆ

ಮಹಿಳೆ ಸ್ವಾವಲಂಬಿಯಾಗಿ ಆರ್ಥಿಕವಾಗಿ ಬಲಶಾಲಿಯಾದರೆ ಇಡೀ ಕುಟುಂಬವೆ ಸದೃಢವಾದಂತೆ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಒಂದು ಕಾಲದಲ್ಲಿ ಅಡುಗೆ ಮನೆಗೆ ಮಾತ್ರ ಸೀಮಿತಳಾಗಿದ್ದ ಮಹಿಳೆ ಈಗ ಎಲ್ಲಾ

ಬಿಗ್ ಬಾಸ್ ನಿಂದ ಮೊದಲ ವಾರವೇ ಹೊರ ಬಂದ್ರು ಸ್ಟ್ರಾಂಗ್ ಆಗಿ ಕಾಣಿಸಿಕೊಂಡಿದ್ದ ನಟಿ..!

ಬಿಗ್ ಬಾಸ್ ಸೀಸನ್ 11 ವಾರಕ ಕಥೆ ಕಿಚ್ಚನ ಜೊತೆಗೆ ಅದ್ಭುತವಾಗಿ ನಡೆದಿದೆ. ಇಂದು ಸೂಪರ್ ಸಂಡೇ ವಿತ್ ಸುದೀಪ ಪಂಚಾಯ್ತಿ ನಡೆಯಲಿದ್ದು, ಈ ಪಂಚಾಯ್ತಿಯಲ್ಲಿಯೇ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಮೊದಲ ವಾರಕ್ಕೆ ನಟಿ

error: Content is protected !!